- ಓಮ್ನಿ ವಾಹನ ಬೆಂಕಿಗಾಹುತಿ
ಚಿಕ್ಕಮಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪಿಡಿಒ ಒಬ್ಬರ ಓಮ್ನಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕಿನ ಶಂಭೈನೂರು ಗ್ರಾಮದಲ್ಲಿ ನಡೆದಿದೆ.
ಬಸಾಪುರ ಗ್ರಾಮದದಲ್ಲಿ ಕಲ್ಲೇಶಪ್ಪ ಎಂಬುವವರು ರಾಗಿ ಬೆಳೆದಿದ್ದು, ಅದೇ ಬಗರ್ ಹುಕುಂ ಜಮೀನಿನಲ್ಲಿ ಪಿಡಿಒ ಹನುಮಂತಪ್ಪ ಎಂಬುವವರು ರಾಗಿ ಕಟಾವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಬುಧವಾರ ಸಂಜೆ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಪಿಡಿಒ ಹನುಮಂತಪ್ಪನವರ ಓಮ್ನಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಇನ್ನೂ ಬೆಂಕಿ ಹಚ್ಚಿದ ಹಿನ್ನೆಲೆ ಗಂಟೆಗೂ ಹೆಚ್ಚು ಕಾಲ ಓಮ್ನಿ ವಾಹನ ಹೊತ್ತಿ ಉರಿದಿದ್ದು, ಗ್ರಾಮಸ್ಥರಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ಹಾಗೂ ಕೊಲೆಗೆ ಯತ್ನದ ಪ್ರತಿದೂರು ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಪಿಡಿಒ ಹನುಮಂತಪ್ಪ ಅವರ ಮೇಲೆ ಶಾಂತಿ ಕದಡಿದ ಆರೋಪದಡಿ ದೂರು ದಾಖಲಾಗಿದೆ. ಹಿಂದೆ ದಾಖಲಾಗಿರುವ ಮೂರು ಪ್ರಕರಣ ಬಾಕಿ ಇವೆ. ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಪಂಚಾಯತ್ ರಾಜ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೆÇಲೀಸ್ ವರಿಷ್ಟಾಧಿಕಾರಿ ತಿಳಿಸಿದ್ದಾರೆ.