- ದಾವಣಗೆರೆಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆ
- ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಪುತ್ರಿ ಮದುವೆ
NAMMUR EXPRESS
ದಾವಣಗೆರೆ/ಹುಬ್ಬಳ್ಳಿ: ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಚಲನ ಮಾಡಿದೆ. ಒಂದು ಕಡೆ ದಾವಣಗೆರೆ ಜಿಲ್ಲೆಯ ಕೊಂಡಜ್ಜಿಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿ ಉದ್ಘಾಟನೆ ಮಾಡಿದ್ದಾರೆ. ಅವರಿಗೆ ರಾಜ್ಯ ಸಿಎಂ ಬೊಮ್ಮಾಯಿ, ಗೃಹ ಮಂತ್ರಿ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಕೂಡ ಗಮನ ಸೆಳೆದಿದೆ.
ದಾವಣಗೆರೆಯಲ್ಲಿ ಮಾತನಾಡಿದ ಅಮಿತ್ ಶಾ, ಯಾರಾದರೂ ಹೊಸಬರು ಮುಖ್ಯಮಂತ್ರಿಯಾಗಲಿ ಆಗಲಿ ಎಂದು ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದರು. ಅದರಂತೆಯೇ ಬಸವರಾಜ ಬೊಮ್ಮಾಯಿ ಅವರೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಸ್ಪಷ್ಟ ಬಹುಮತಗಳಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎಲ್ಲರಿಗೂ ಕೊವಿಡ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.ಕೊವಿಡ್ ವಿರುದ್ಧ ಸರ್ಕಾರದ ಜತೆ ಜನರೂ ಹೋರಾಡಿದ್ದಾರೆ. ಇಡೀ ಜಗತ್ತೆ ಈ ಮಹಾಮಾರಿಗೆ ತತ್ತರಿಸಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಲಸಿಕೆ ನೀಡಿದ ದೇಶ ಭಾರತ. ಒಂದೇ ದಿನ 1.43 ಕೋಟಿ ಜನರಿಗೆ ಲಸಿಕೆ ನೀಡಿದ್ದೇವೆ. ಕರ್ನಾಟಕದಲ್ಲಿ 5 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ.90ರಷ್ಟು ಜನರಿಗೆ ಲಸಿಕೆ ವಿತರಿಸುತ್ತೇವೆ ಎಂದು ಅವರು ಘೋಷಿಸಿದರು.
ಗೃಹ ಸಚಿವರ ರೌಂಡ್ಸ್!: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ದಾವಣಗೆರೆ ಜಿಲ್ಲೆಯ ಕೊಂಡಜ್ಜಿಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರನ್ನು ಸ್ವಾಗತಿಸಿ ಮಾತುಕತೆ ನಡೆಸಿದರು.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.