ಕರ್ನಾಟಕ ಪ್ರೈಮ್ ನ್ಯೂಸ್
ದಾವಣಗೆರೆ ಗಣೇಶ ವಿಸರ್ಜನೆ ವೇಳೆ ಕಿರಿಕ್!
– ಕಿಡಿಗೇಡಿಗಳಿಂದ ಕಲ್ಲುತೂರಾಟ: ಇಬ್ಬರು ಪೊಲೀಸರಿಗೆ ಗಾಯ
– ಪ್ರಚೋದನಾತ್ಮಕ ಭಾಷಣವೇ ಗಲಾಟೆಗೆ ಕಾರಣ!
– ಚಿಕ್ಕಮಗಳೂರು: ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಧರಿಸಿ ಪೋಸ್ಟರ್
– ಪ್ಯಾಲೆಸ್ತೀನ್ ಬಾವುಟ ವಿವಾದ ದಿನೇ ದಿನೇ ಹೆಚ್ಚಳ
NAMMUR EXPRESS NEWS
ದಾವಣಗೆರೆ: ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಘಟನೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್ ಸ್ಟೇಬಲ್ ರಘು ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಇನ್ನು ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದರು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚಿಸಿದ ಪೊಲೀಸರು ಇನ್ನು ಕಲ್ಲು ತೂರಿದ ಕಿಡಿಗೇಡಿಗಳನ್ನ ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆಕಾರ್ಯ ನಡೆದಿದೆ. ಸಧ್ಯ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳನ್ನ ಪೊಲೀಸರು ಮುಚ್ಚಿಸಿದ್ದಾರೆ. ಇತ್ತ ಶಾಂತಿ ಟಾಕೀಸ್ ರಸ್ತೆ ಹಾಗೂ ಎನ್ ಆರ್ ರಸ್ತೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತ ಮಾಡಲಾಗಿದೆ.
ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ ನಾಯಕರು ಯುವಕರನ್ನ ನಿಯಂತ್ರಣ ಮಾಡಲು ಮುಂದಾದರು.
ಪ್ರಚೋದನಾತ್ಮಕ ಭಾಷಣವೇ ಗಲಾಟೆಗೆ ಕಾರಣ!
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ ಉಮಾ ಪ್ರಶಾಂತ್, ‘ಬೇತೂರ ರಸ್ತೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದೇವೆ. ನಿಷೇಧಾಜ್ಞೆ ಜಾರಿ ಬಗ್ಗೆ ಡಿಸಿ ಜೊತೆ ಚರ್ಚೆ ನಡೆಸಲಾಗಿದೆ. ಪ್ರಚೋದನಾತ್ಮಕ ಭಾಷಣವೇ ಗಲಾಟೆಗೆ ಕಾರಣವಾಗಿದೆ. ನಿನ್ನೆ ಒಂದು ಕೋಮಿನವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಇನ್ನೊಂದು ಕೋಮಿನವರು ವಿರೋಧ ವ್ಯಕ್ತಪಡಿಸಿದ್ದರು. ಎರಡೂ ಕಡೆಯವರಿಂದ ದೂರು ದಾಖಲಾಗಿದೆ, ಕ್ರಮಕೈಗೊಳ್ಳುತ್ತೇವೆ ಎಂದರು.
ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ವಿವಾದ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಯುವಕನೋರ್ವ ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಹಾಕಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ
ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಣಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಯುವಕನ ಪೋಸ್ಟ್ ಕಂಡ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ಯಾಲೆಸ್ತೀನ್ ವಿಚಾರವಾಗಿ ಮುಸ್ಲಿಂ ಯುವಕರಿಗೆ ಯಾರೋ ಪ್ರಚೋದನೆ ನೀಡುತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಪ್ಯಾಲೆಸ್ತೀನ್ ಬಾವುಟ ವಿವಾದ ದಿನೇ ದಿನೇ ಹೆಚ್ಚಳ!
ಕರ್ನಾಟಕದಲ್ಲಿ ಇತ್ತೀಚಿಗೆ ಪ್ಯಾಲೆಸ್ತೀನ್ ಬಾವುಟಹಾರಿಸುವುದು, ಘೋಷಣೆ ಕೂಗುವುದು ಪ್ರಕರಣ ಮೇಲಿಂದ ಮೇಲೆ ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿ ನಾಲ್ವರು ಅಪ್ರಾಪ್ತರು ಪ್ಯಾಲೆಸ್ತೀನ್ ಧ್ವಜ ಹಿಡಿದುಕೊಂಡು ಬೈಕ್ನಲ್ಲಿ ಸುತ್ತಾಡಿದ್ದರು. ಇದಾದ ಬಳಿಕ ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿತ್ತು. ಶಿವಮೊಗ್ಗದ ಹಣಗೆರೆಕಟ್ಟೆಯಲ್ಲಿ ಬ್ಯಾನರ್ ಹಾಕಿದ್ದರು. ಕೋಲಾರದಲ್ಲೂ ಭಾವುಟ ಹಿಡಿದು ಬೈಕಲ್ಲಿ ಓಡಾಡಿದ್ದರು.