ವಿದ್ಯಾರ್ಥಿಗಳಿಗಾಗಿ 114 ಕೋಟಿ ಹಣ ಮೀಸಲಿಟ್ಟ ಡಾ.ವೀರೇಂದ್ರ ಹೆಗ್ಗಡೆ
– 97 ಸಾವಿರ ವಿದ್ಯಾರ್ಥಿಗಳಿಗೆ 114 ಕೋಟಿ ಹಣವನ್ನು ಸುಜ್ಞಾನನಿ ದೇವಿ ಶಿಷ್ಯವೇತನ
– ಹೊಸದುರ್ಗದಲ್ಲಿ ಶಿಷ್ಯವೇತನ ಕಾರ್ಯಕ್ರಮದಲ್ಲಿ ವೃತ್ತಿಪರ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣೆ
NAMMUR EXPRESS NEWS
ಹೊಸದುರ್ಗ: ಹೊಸದುರ್ಗ ಈ ಬಾರಿಯ ವೃತ್ತಿಪರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದಾದ್ಯಂತ 97 ಸಾವಿರ ವಿದ್ಯಾರ್ಥಿಗಳಿಗೆ 114 ಕೋಟಿ ಹಣವನ್ನು ಸುಜ್ಞಾನನಿ ದೇವಿ ಶಿಷ್ಯವೇತನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮೀಸಲಿರಿಸಿದ್ದಾರೆ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ವಿದ್ಯಾಭ್ಯಾಸಕ್ಕಾಗಿ ಈ ಹಣವನ್ನು ವಿನಿಯೋಗಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಿರಿಯೂರು ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ತಿಳಿಸಿದರು..
ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಚೇರಿಯಲ್ಲಿ ನಡೆದ ಸುಜ್ಞಾನ ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮದಲ್ಲಿ ವೃತ್ತಿಪರ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ನೀಡಿ ಮಾತನಾಡಿದ ಅವರು ಪ್ರತಿ ತಿಂಗಳಿಗೆ ಒಂದು ಸಾವಿರದಂತೆ 12,000 ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧರ್ಮಸ್ಥಳ ಸಂಸ್ಥೆ ನೀಡುತ್ತಾ ಬಂದಿದೆ. ನಮ್ಮ ಮನೆಯ ಒಂದು ಮಗು ವಿದ್ಯಾಭ್ಯಾಸ ಮಾಡಿ ಮುಂದೆ ಬಂದಾಗ ಒಂದು ಕುಟುಂಬದ ನೆಮ್ಮದಿಯ ಜೀವನಕ್ಕೆ ದಾರಿಯಾಗಬಲ್ಲದು. ವಿದ್ಯಾರ್ಥಿಗಳು ಮನಸ್ಸು ಮಾಲಿನ್ಯ ಮಾಡಿಕೊಳ್ಳದೆ ವಿದ್ಯಾಭ್ಯಾಸದ ಕಡೆ ಗಮನ ಕೊಟ್ಟು ಸಾಧನೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ತುಂಬಿನಕೆರೆ ಬಸವರಾಜ್ ಮಾತನಾಡಿ, ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ನಾವು ನಾವು ಹಾಕುವ ಪುನಹ ಉತ್ತರ ಅಭಿಯೋಗಕ್ಕಾಗಿ ಸಹಾಯ ಮಾಡುವ ವ್ಯಕ್ತಿ ಪ್ರಪಂಚದಲ್ಲಿ ಯಾರಾದರೂ ಇದ್ದರೆ ಅದು ವಿರೇಂದ್ರ ಹೆಗ್ಗಡೆಯವರು, ಅದು ಧರ್ಮಸ್ಥಳ ಮಾತ್ರ. ಸಮಾಜದ ರೈತರ, ದೀನ ದುರ್ಭಲರ ಮಹಿಳೆಯರ ವಿಧ್ಯಾರ್ಥಿಗಳ ಏಳಿಗೆಗಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿರುವ ವಿರೇಂದ್ರ ಹೆಗ್ಗಡೆಯವರ ಕೆಲಸ ಶ್ಲಾಘನೀಯ ಎಂದು ತಿಳಿಸಿದರು.
ಕ್ಷೇತ್ರ ಯೋಜನಾಧಿಕಾರಿ ಶಿವಣ್ಣ.ಎಸ್ ಸ್ವಾಗತಿಸಿ, ಕುಮಾರಿ ಪ್ರತಿಭಾ ನಿರೂಪಿಸಿ, ಚಿಕ್ಕನಾಗಪ್ಪ ವಂದಿಸಿದರು. ಮಂಜೂರಾತಿ ಪತ್ರ ಪಡೆದುಕೊಂಡ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.