Categories
ಡೆಲ್ಲಿ

ಆಭರಣ ಪ್ರಿಯರಿಗೆ ಬಿಗ್ ಶಾಕ್..!!

ಆಭರಣ ಪ್ರಿಯರಿಗೆ ಬಿಗ್ ಶಾಕ್..!!
– ಸಾರ್ವಕಾಲಿಕ ಹೊಸ ದಾಖಲೆ ಸೃಷ್ಟಿಸಿದ ಚಿನ್ನ
– 10 ಗ್ರಾಂ ಚಿನ್ನದ ಬೆಲೆ ಈಗ 1 ಲಕ್ಷ ರೂಪಾಯಿ

NAMMUR EXPRESS NEWS
ನವದೆಹಲಿ: ಚಿನ್ನದ ಬೆಲೆ ಗಗನಕ್ಕೆ ಏರುತ್ತಲೇ ಇದೆ. ಮುಂಬೈನ ಜವೇರಿ ಬಜಾರ್‌ನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ಸಮೀಪಕ್ಕೆ ಹೋಗಿದೆ. ಆ ಮೂಲಕ ಹೊಸ ದಾಖಲೆ ಬರೆದಿದೆ.

24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ಈಗ 98,350 ರೂ.ಗೆ ತಲುಪಿದೆ. 1 ಲಕ್ಷ ರೂ. ಮಾರ್ಕ್‌ ತಲುಪಲು ಕೇವಲ 1,650 ರೂ. ದೂರದಲ್ಲಿದೆ. 22 ಕ್ಯಾರೆಟ್‌ ಚಿನ್ನದ ಬೆಲೆ 90,150 ರೂ. ಆಗಿದೆ. ಇತರೆ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಸುಂಕ ವಿಧಿಸಿದ್ದೇ ಚಿನ್ನದ ಬೆಲೆ ದಾಖಲೆಯ ಏರಿಕೆಗೆ ಕಾರಣ ಎನ್ನಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಹೀಗಾಗಿ, ಸುರಕ್ಷಿತ ಹೂಡಿಕೆಗಾಗಿ ಹೂಡಿಕೆದಾರರು ಚಿನ್ನದತ್ತ ಆಕರ್ಷಿತರಾಗಿದ್ದಾರೆ. ಅಕ್ಷಯ ತೃತೀಯಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಚಿನ್ನದ ಬೆಲೆ ಒಂದು ಲಕ್ಷ ಸನಿಹಕ್ಕೆ ತಲುಪಿರುವುದು ಆಭರಣ ಪ್ರಿಯರು ಬೆಚ್ಚಿಬೀಳುವಂತೆ ಮಾಡಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.