ರಾಹುಲ್ ಗಾಂಧಿ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆಗೆ ಕರೆ
* ಪ್ರಕರಣ ಸಂಬಂಧ ಜಾರ್ಜ್‌ಶೀಟ್ ಸಲ್ಲಿಸಿರುವ ಇ.ಡಿ
* ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆಗೆ ಕರೆಕೊಟ್ಟ ಯುವ ಮೋರ್ಚಾ
NAMMMUR EXPRESS NEWS
ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ,ಆದ್ದರಿಂದ ನೈತಿಕ ಹೊಣೆಹೊತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ದೇಶದಾದ್ಯಂತ ಬಿಜೆಪಿ ಯುವ ಮೋರ್ಚಾ ಏ.17 ರಂದು ತುರ್ತು ಪ್ರತಿಭಟನೆಗೆ ಕರೆ ನೀಡಿದೆ. ಈ ಸಂಬಂಧ ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಪ್ರಕರಣದ ಹಿನ್ನೆಲೆ ಏನು ??
ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿಗೂ ಹೆಚ್ಚಿನ ಆಸ್ತಿ ದುರುಪಯೋಗ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು.
ಕಾಂಗ್ರೆಸ್ ಮಾಲೀಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ.ಮೂಲಗಳ ಪ್ರಕಾರ, ಕಾಂಗ್ರೆಸ್ ನ ಸ್ಯಾಮ್ ಪಿತ್ರೋಡಾ ಹಾಗೂ ಹಲವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣವನ್ನು ಪರಿಗಣಿಸಿದ ರೌಸ್ ಅವೆನ್ಯೂ ನ್ಯಾಯಾಲಯದ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ಏಪ್ರಿಲ್ 25 ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ (ಎಜೆಎಲ್) ಕಾಂಗ್ರೆಸ್ ಪಕ್ಷ ₹ 90 ಕೋಟಿಯಷ್ಟು ಸಾಲ ನೀಡಿತ್ತು. ಯಂಗ್ ಇಂಡಿಯಾ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ ₹ 50 ಲಕ್ಷ ಹಣ ನೀಡಿ ಎಜೆಎಲ್ ಕಾಂಗ್ರೆಸ್‌ಗೆ ನೀಡಬೇಕಿದ್ದ ₹ 90 ಕೋಟಿಯಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು ಎಂಬುದು ಹಗರಣದ ಹಿನ್ನೆಲೆ. ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿಗೂ ಅಧಿಕ ಆಸ್ತಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.
ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ – ಯಂಗ್ ಇಂಡಿಯನ್ ಲಿಮಿಟೆಡ್ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡಿದ್ದರು.
