ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್ ನಾಗ್‌ಗೆ ಪದ್ಮ ಭೂಷಣ
* 2024 -25 ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಅನಂತ್‌ನಾಗ್ ಹೆಸರು
* ಪ್ರಶಸ್ತಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು,ಎಲ್ಲರಿಂದ ಶುಭಾಶಯಗಳ ಮಹಾಪೂರ
NAMMMUR EXPRESS NEWS
ನವದೆಹಲಿ: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ನವದೆಹಲಿಯಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಅವರ ಹೆಸರನ್ನು ಘೋಷಿಸಲಾಗಿತ್ತು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ನಟ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಕುಟುಂಬ ಸದಸ್ಯರು ಸಂತೋಷ ವ್ಯಕ್ತಪಡಿಸಿದರು.
ಅನಂತ್ ನಾಗ್ ಚಿತ್ರರಂಗ ಮಾತ್ರವಲ್ಲದೆ ರಾಜಕೀಯದಲ್ಲೂ ಸಕ್ರಿಯರಾಗಿದ್ದ ಅನಂತ್ ನಾಗ್ ಕರ್ನಾಟಕದಿಂದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಲಾ ರಂಗದಲ್ಲಿ ಅನಂತ್ ನಾಗ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಚಂದನವನದ ಹಿರಿಯ ನಟನಿಗೆ ಎಲ್ಲೆರಿಂದಲೂ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.
