ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿ
– ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನ
– ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ
NAMMUR EXPRESS NEWS
ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿ ಗೆ ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ. ವಿವರವನ್ನು ನೀಡಲು ಹಾಗೂ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ: 080-43344334, 080-43344335, 080-43344336, 080-43344342 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.