- ರಾಜಧಾನಿಯಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ
- ರಾಜ್ಯದ ಅಭಿವೃದ್ಧಿಗೆ ಎಲ್ಲರ ಕೊಡುಗೆ ಸ್ಮರಿಸಿದ ಸಿಎಂ
- ಎಲ್ಲಾ ತಾಲೂಕಲ್ಲೂ ಅಧಿಕಾರಿಗಳು, ಶಾಸಕರ ಧ್ವಜಾರೋಹಣ
NAMMUR EXPRESS NEWS
ಒಂದು ಕಡೆ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದರೆ ಇತ್ತ ರಾಜಧಾನಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಲಿರುವ ಅವರು ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಅಮೃತ ಮಹೋತ್ಸವ ನೆನಪಿಗೆ ಸರ್ಕಾರ ಹೊಸ ಹೊಸ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದಾರೆ.
ಮಹಿಳೆಯರ ಸ್ವ ಉದ್ಯೋಗ, 250 ಕೋಟಿ ವೆಚ್ಚದಲ್ಲಿ ಶೌಚಾಲಯ, ಭೂ ರಹಿತ ಮಕ್ಕಳಿಗೆ ಸೌಲಭ್ಯ, ಶೇ.100ರಷ್ಟು ಶೌಚಾಲಯ ನಿರ್ಮಾಣ, 4050 ಹೊಸ ಅಂಗನವಾಡಿ ನಿರ್ಮಾಣ, ಶಾಲಾ ಪೂರ್ವ ಶಿಕ್ಷಣ, ಮೃತ ಯೋಧರ ಕುಟುಂಬಕ್ಕೆ ಸರ್ಕಾರಿ ಕೆಲಸದ ಜತೆ 25 ಲಕ್ಷ ಸಹಾಯ ಧನ, ಕರಕುಶಲ ಅಭಿವೃದ್ಧಿ ನಿಗಮದಿಂದ 50 ಸಾವಿರ ಸಾಲ, 8100 ಮಂದಿ ಮಹಿಳೆಯರಿಗೆ ಉದ್ಯೋಗ ಸೇರಿದಂತೆ ಅನೇಕ ಘೋಷಣೆಗಳನ್ನು ಸಿಎಂ ಮಾಡಿದ್ದಾರೆ.
ಸ್ವಾತಂತ್ರ್ಯದಲ್ಲಿ ಪೊಲೀಸರ ಸಂಭ್ರಮ!
ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಿಎಆರ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಆಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ನ ಒಟ್ಟು 36 ತುಕಡಿಗಳಲ್ಲಿ ಸುಮಾರು 1,200 ಮಂದಿ ಪಂಥಸಂಚಲನ ನಡೆಸಿದರು. ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದ ಸದಸ್ಯರು ನಾಡಗೀತೆ ಮತ್ತು ರೈತಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಂಗಳೂರು ಉತ್ತರ ಜಿಲ್ಲೆಯ ಚಿಕ್ಕಬಿದರಕಲ್ಲು ಸರ್ಕಾರಿ ಫ್ರೌಡಶಾಲೆಯ 800 ಮಕ್ಕಳು ‘ಅಮೃತ ಮಹೋತ್ಸವದ ಭಾರತದ ಸಂಭ್ರಮದ’ ನೃತ್ಯ ಪ್ರದರ್ಶಿಸಿದರು.ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 800 ಮಕ್ಕಳು ‘ಈಸೂರು ಹೋರಾಟ’ ಹಾಗೂ ಗುರಪ್ಪನಪಾಳ್ಯದ ಲಿಲ್ಲಿ ರೋಜ್ ಪ್ರೌಢಶಾಲೆಯ 850 ಮಕ್ಕಳು ‘ಜೈ ಜವಾನ್ ಜೈ ಕಿಸಾನ್’ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸೇನೆಯ ಎಂಇಜಿ ರೆಜಿಮೆಂಟ್ ತಂಡದವರು ಟೆಂಟ್ ಪೆಗ್ಗಿಂಗ್, ಕಾಂಬ್ಯಾಟ್ ಫ್ರೀ ಫಾಲ್ ಮತ್ತು ದೇಹದಾರ್ಢ್ಯ ಸಾಹಸ ಪ್ರದರ್ಶಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಮಾಣೆಕ್ ಶಾ ಪರೇಡ್ ಗ್ರೌಂಡ್ನ ಕಾರ್ಯಕ್ರಮಕ್ಕೆ ಈ ಬಾರಿ ಸಾರ್ವಜನಿಕರಿಗೂ ಪ್ರವೇಶ ನೀಡಲಾಗಿತ್ತು.
ಈದ್ಗಾ ಮೈದಾನದಲ್ಲಿ ಸಡಗರ
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಡಗರದಿಂದ ನಡೆಯಿತು. ಸ್ಥಳೀಯ ಶಾಸಕ ಜಮೀರ್ ಸೇರಿ ಅನೇಕ ನಾಯಕರು ಭಾಗಿಯಾಗಿದ್ದರು. ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಎಲ್ಲಾ ಸಿದ್ಧತೆ ನಡೆಸಿದ್ದರು.
ತುಮಕೂರಲ್ಲಿ ಆರಗ ಧ್ವಜ ವಂದನೆ
ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದಲ್ಲಿ ಗೃಹ ಸಚಿವ ಧ್ವಜಾರೋಹಣ ನೆರವೇರಿಸಿದರು.ಶ್ರೀ ಸಿದ್ದಗಂಗಾ ಸ್ವಾಮೀಜಿ, ಶಾಸಕ ಶ್ರೀ ಜ್ಯೋತಿ ಗಣೇಶ್, ಎಸ್ಪಿ ರಾಹುಲ್ ಶಹಾಪುರವಾಡ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇಳೆ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ಅವರು ಸ್ವತಃ ತಾನೇ ನಿಂತು ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜಾರೋಹಣ ಮಾಡಿಸಿ ಗಮನ ಸೆಳೆದಿದ್ದಾರೆ.
ಕಾಫಿನಾಡಲ್ಲಿ ಅದ್ಧೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣದಲ್ಲಿ 2000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ನಂತರ ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಿದರು. ನಂತರ ದೇಶ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿದ್ದಾರೆ.
ರಾಜ್ಯದ 31 ಜಿಲ್ಲೆಯಲ್ಲೂ ಸಂಭ್ರಮ
ರಾಜ್ಯದ 31 ಜಿಲ್ಲೆಗಳಲ್ಲೂ ಸ್ವಾತಂತ್ರ್ಯ ಸಂಭ್ರಮ ಮೊಳಗಿತ್ತು. ಎಲ್ಲಾ ಕಡೆ ಧ್ವಜಾರೋಹಣ ನಡೆಯಿತು. ಮಕ್ಕಳು, ಸಂಘ ಸಂಸ್ಥೆಗಳು ಸಾಥ್ ನೀಡಿದವು. ಎಲ್ಲಾ ಕಡೆ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ. ಮನೆ ಮನೆ, ಕಚೇರಿ ಎಲ್ಲಾ ಕಡೆ ಸ್ವಾತಂತ್ರ್ಯ ಸಂಭ್ರಮ ನಡೆಯುತ್ತಿದೆ.