- ಪ್ರಣಾಳಿಕೆ, ನೀತಿ, ವಿಷನ್ 2023 ಸಮಿತಿಗೆ ನೇಮಕ
NAMMUR EXPRESS NEWS
ಶಿವಮೊಗ್ಗ : ರಾಜ್ಯ ಕಾಂಗ್ರೆಸ್’ನ ಪ್ರಣಾಳಿಕೆ, ನೀತಿ ಮತ್ತು ವಿಷನ್ 2023 ಸಮಿತಿಗೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಖಿಲ ಭಾರತೀಯ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಿತಿಗೆ ಡಾ. ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಮಾಜಿ ಶಾಸಕ ಮಧು ಬಂಗಾರಪ್ಪ, ಪ್ರೊ. ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ಪಟ್ಟಿಗೆ ಅಂಕಿತ ಹಾಕಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.