- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಮಲೆನಾಡಿನ ನಿಯೋಗ
NAMMUR EXPRESS NEWS
ರಾಜ್ಯ ಅಡಿಕೆ ಬೆಳೆಗಾರರ ಸಂಘದ ನಿಯೋಗದೊಂದಿಗೆ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ಅಡಿಕೆ ಬೆಳೆಗಾರರ ಹಿತ ರಕ್ಷಿಸುವಂತೆ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ಹರತಾಳು ಹಾಲಪ್ಪ ಕ್ಯಾಂಪ್ಕೋ ಅಧ್ಯಕ್ಷ ಶ್ರಿ ಕಿಶೋರ್ ಕುಮಾರ್ ಕೊಡಗಿ, ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಜೊತೆಗಿದ್ದರು.