- ಶಿಕ್ಷಕರಿಂದ ಲಂಚ ಪಡೆಯುವಾಗ ದಾಳಿ
- ಬೇರೆ ಶಾಲೆಗೆ ನಿಯೋಜನೆ ಮಾಡಲು ಲಂಚ
NAMMUR EXPRESS NEWS
ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಡೂರು ತಾಲ್ಲೂಕಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ. ತಿಮ್ಮಾಪುರ ಗೇಟ್ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಲೋಕಾಯುಕ್ತ ಈಗ ಎಲ್ಲಾ ಕಡೆ ಕಣ್ಣಿಟ್ಟಿದ್ದು ಲಂಚ, ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಿದೆ.