- ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
- ಸಕಲೇಶಪುರಪುರದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ
NAMMUR EXPRESS NEWS
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ (28) ಬಂಧಿತ ಆರೋಪಿಗಳು. ಈ ಮೂಲಕ ಪ್ರವೀಣ ನೆಟ್ಟಾರ್ ಕೊಲೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.
ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ದಕ್ಷಿಣಕನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಹತ್ಯೆಯ ದಾಳಿಕೋರರನ್ನು ಗುರುತಿಸಿರುವ ಪೊಲೀಸರು, ಹತ್ಯೆ ನಡೆಸಿದವರಿಗೆ ಶೋಧ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಡಾನೆಗೆ ಬಲಿ: ಕಾಡಾನೆ ದಾಳಿಗೆ ವೃದ್ದನೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲತೋಟ ಗ್ರಾಮದಲ್ಲಿ ನಡೆದಿದೆ.
ರಾಜದೀಪ ಎಂಬುವವರ ಕಾಫಿ ತೋಟದಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 70 ವರ್ಷ ಪ್ರಾಯದ ಕೇರಳ ಮೂಲದ ರಾಮಕೃಷ್ಣ ಆನೆ ತುಳಿತಕ್ಕೆ ಬಲಿಯಾದ ಮೃತ ದುರ್ದೈವಿ.
ಕಳೆದ ಮೂರು ದಿನಗಳ ಹಿಂದೆ ರಾಮಕೃಷ್ಣ ಅವರು ನಾಪತ್ತೆಯಾಗಿದ್ದರು ಎನ್ನಲಾಗಿದ್ದು ಅವರನ್ನು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದಾಗ ಯಾವುದೇ ಮಾಹಿತಿಗಳು ಲಭ್ಯವಾಗಿರಲಿಲ್ಲ. ಈ ಕುರಿತಾಗಿ ತೋಟದ ಮಾಲೀಕರು ಬಂದು ತೋಟದಲ್ಲಿ ಎಲ್ಲೆಡೆ ಹುಡುಕಿದಾಗ ತೋಟದ ಮನೆಯಿಂದ ಕೆಲ ಅಂತರದಲ್ಲಿ ರೈಟರ್ ರಾಮಕೃಷ್ಣ ಮೃತಪಟ್ಟಿರುವುದು ಕಂಡಿದೆ.