- ವಿವಿಧ ಕಾರ್ಯಕ್ರಮಗಳ ಉದ್ಘಾಟನೆ
NAMMUR EXPRESS NEWS
ಮಂಗಳೂರು: ಪ್ರಧಾನಿ ಮೋದಿ ಸೆಪ್ಟೆಂಬರ್ 2, ಶುಕ್ರವಾರದಂದು ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಮಾವೇಶವನ್ನು ಆಯೋಜಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಯೋಜನೆ ಹಾಕಿಕೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಮುಂದಾಗಿದೆ.
ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಪ್ರಧಾನಿಯವರನ್ನು ಅಹ್ವಾನಿಸಲಾಗಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ. ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತ ಮಾಹಿತಿ ದೊರೆತಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮದ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕ್ಕಾಗಿ ಮೋದಿ ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಇದೇ ವೇಳೆ ಮಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ತಯಾರಿ ಮಾಡಿಕೊಂಡಿದೆ.
ಬಿಜೆಪಿ ಮತ್ತು ಹಿಂದುತ್ವದ ಭದ್ರಕೋಟೆ ಎನಿಸಿಕೊಂಡಿರುವ ಅವಿಭಜಿತ ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ಪಕ್ಷಕ್ಕೆ ಮುಳುವಾಗುವಂತಹ ಸನ್ನಿವೇಶಗಳು ಹುಟ್ಟಿಕೊಂಡಿದ್ದವು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಮಂಗಳೂರು ಭೇಟಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲಿದೆ ಎನ್ನುವ ನಿರೀಕ್ಷೆ ಪಕ್ಷದ ಮುಖಂಡರದ್ದಾಗಿದೆ.