- ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ
NAMMUR EXPRESS NEWS
ಕೋಲಾರ: ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೋಲೀಸರ ಅವಶ್ಯಕತೆ ಹೆಚ್ಚಾಗಿದೆ. ಶೀಘ್ರದಲ್ಲೇ 5 ಸಾವಿರ ಪೋಲೀಸರನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಕೆಜಿಎಫ್ ಪೊಲೀಸ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಾಗಾರ ಮತ್ತು ಶ್ವಾನದಳ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಜಿಎಫ್ ಪೊಲೀಸ್, ಪರಂಪರೆಗೆ ಒಂದು ದೊಡ್ಡ ಇತಿಹಾಸವಿದೆ. ಎರಡು ತಾಲ್ಲೂಕಿಗೆ ಒಂದು ರಾಜ್ಯದಲ್ಲಿ ಎಲ್ಲೂ ಇಲ್ಲ. ಆಡಳಿತ ಕಚೇರಿಗಾಗಿ 22.81 ಕೋಟಿ ಕಚೇರಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಒಂದು ವರ್ಷದಲ್ಲಿ ರಾಜ್ಯದಲ್ಲಿ 200 ಕೋಟಿ ವೆಚ್ಚದ 100 ಹೊಸ ಪೋಲೀಸ್ ಕಟ್ಟಡ ಕಟ್ಟಿದ್ದೇವೆ ಎಂದರು.