- ನಂಬರ್ಪ್ಲೇಟ್ ಇಲ್ಲದ ಕಾರಿನಿಂದ ಎಸ್ಕೆಪ್
- ಹಾವೇರಿಯಲ್ಲಿ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು
NAMMUR EXPRESS NEWS
ಹಾವೇರಿ : ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಹೆದ್ದಾರಿಯಲ್ಲಿ ಶ್ರೀಗಳನ್ನು ಅರೆಸ್ಟ್ ಮಾಡಲಾಗಿದೆ.
ಮುರುಘಾ ಶ್ರೀ ವಿರುದ್ಧ ಮಠದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸ್ ಕೇಸ್ ದಾಖಲಾಗಿತ್ತು.ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎದುರಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಕ್ಕ ಮಹಾದೇವಿ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಮುರುಘಾ ಶರಣರು ಲೈಂಗಿಕ ರೀತಿಯಲ್ಲಿ ಬಳಸಿಕೊಂಡಿದ್ದಾರೆಂಬ ಗಂಭೀರ ಆರೋಪ ಎದುರಾಗಿರುವ ಹಿನ್ನೆಲೆಯಲ್ಲಿ ಮಠದ ಬಗ್ಗೆ ಪರ – ವಿರೋಧದ ಚರ್ಚೆಗಳು ಈಗಾಗಲೇ ಹುಟ್ಟಿಕೊಂಡಿವೆ.
ಈ ನಡುವೆ ತಮ್ಮವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬರುತ್ತಿದ್ದಂತೆಯೇ ಮಠದಿಂದ ಮರುಘಾ ಶರಣರು ನಾಪತ್ತೆಯಾಗಿದ್ದಾರಾ ಎಂಬ ಅನುಮಾನ ಶುರುವಾಗಿದೆ. ಮಠದ ಆವರಣವು ಬೆಳಗ್ಗೆಯಿಂದ ಬಿಕೋ ಎನ್ನುತ್ತಿದ್ದು ಮಠದ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗ್ಗೆಯಿಂದ ಮುರುಘಾ ಶರಣರು ಮಠದ ಆವರಣದಲ್ಲೆಲ್ಲೂ ಕಾಣಿಸಿಕೊಂಡಿಲ್ಲ.
ಬೆಳಗ್ಗಿನ ಜಾವ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲ ಕ್ರೆಟಾ ಕಾರಿನಲ್ಲಿ ಮುರುಘಾ ಶರಣರು ತೆರಳಿದ್ದಾರೆ ಎನ್ನಲಾಗಿದೆ. ಪ್ರಭಾವಿ ವ್ಯಕ್ತಿಯಾಗಿರುವ ಕೆ.ಸಿ ವಿರೇಂದ್ರಪ್ಪಿ ಗೋವಾದಲ್ಲಿ ಪ್ರಭಾವವನ್ನು ಹೊಂದಿದ್ದಾರೆ. ಗೋವಾದಲ್ಲಿ ಕ್ಯಾಸಿನೋ, ಲಾಡ್ಜ್ ಸೇರಿದಂತೆ ವಿವಿಧ ವ್ಯವಹಾರಗಳನ್ನು ಹೊಂದಿದ್ದಾರೆ. ಲಿಂಗಾಯತ ಸಮುದಾಯದ ಮುಖಂಡ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿರುವ ಪಪ್ಪಿ ಮರುಘಾ ಶರಣರನ್ನು ಗೋವಾಕ್ಕೆ ಕರೆದುಕೊಂಡು ಹೋಗುವ ಯತ್ನ ನಡೆಸಿದ್ದಾರೆಯೇ ಎಂಬ ಅನುಮಾನ ಮೂಡಿದೆ.
ಇತ್ತ ಬಾಲಕಿಯರು ನೆಲೆಸಿರುವ ಬಾಲ ಮಂದಿರಕ್ಕೆ ಮಕ್ಕಳ ಆಯೋಗದ ಅಧ್ಯಕ್ಷರು, ಸಮಿತಿ ಸದಸ್ಯರು, ನ್ಯಾಯಾಧೀಶರು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾಧಿಕಾರಿ, ಎಸ್ಪಿ ಭೇಟಿ ನೀಡಿದ್ದಾರೆ. ಬಾಲಕಿಯರನ್ನು ಭೇಟಿಯಾಗಿರುವ ರಾಜ್ಯ ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷೆ ಜಯಶ್ರೀ ಸಂತ್ರಸ್ತೆಯರಿಂದ ಹೇಳಿಕೆಯನ್ನು ಪಡೆಯಲಿದ್ದಾರೆ.