ಹೆಬ್ರಿಯಲ್ಲಿ ಎಸ್ಆರ್ ಸಂಸ್ಥೆಯಿಂದ ಶೈಕ್ಷಣಿಕ ಕ್ರಾಂತಿ..!
– ನಿರಂತರ ಶೇಕಡ 100ರ ಫಲಿತಾಂಶ ಹೆಗ್ಗಳಿಕೆ
– ಕಳೆದ 25 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ ಸಂಸ್ಥೆ
NAMMUR EXPRESS NEWS
ಹೆಬ್ರಿ: ಹೆಬ್ರಿ ಎಸ್ ಆರ್ ಎಸ್ ಸಮೂಹ ಶಿಕ್ಷಣ ಸಂಸ್ಥೆಯು ಆರಂಭಗೊಂಡು 25 ವರ್ಷ ಕಳೆಯಿತು. ಕೇವಲ ನಾಲ್ಕು ಜನ ವಿದ್ಯಾರ್ಥಿಗಳಿಂದ ಆರಂಭವಾದ ಎಸ್ ಆರ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಎರಡುವರೆ ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮೌಲ್ಯಯುತ, ಶಿಸ್ತುಬದ್ಧ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತೆ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹೆಬ್ರಿಯ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯೂ ಒಂದಾಗಿದೆ.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಆಗುಂಬೆಯಿಂದ ಮಣಿಪಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಹೆಬ್ರಿಯ ಕಿನ್ನಿಗುಡ್ಡೆ ಎಂಬಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಎಲ್ಕೆಜಿಯಿಂದ ಪಿಯುಸಿ ತನಕ 2,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಸಂಸ್ಥೆ ತನ್ನದೇ ಆದ ಛಾಪು ಮೂಡಿಸಿ ನಾಡಿನ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಂಸ್ಥೆ ಹೆಸರನ್ನು ರಾರಾಜಿಸಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ದಾಖಲಾತಿಯನ್ನು ಪಡೆದು ವ್ಯಾಸಂಗವನ್ನು ಮುಂದುವರಿಸುತ್ತಿದ್ದಾರೆ. ಇನ್ನು ಅನೇಕ ಹಳೆ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವೃತ್ತಿ ಜೀವನವನ್ನು ನಡೆಸುತ್ತಿದ್ದು ಉನ್ನತ ಸ್ಥಾನಕ್ಕೇರಿದ್ದು ನಮ್ಮ ಸಂಸ್ಥೆಗೆ ಗೌರವವನ್ನು ತಂದು ಕೊಟ್ಟಿದೆ.
ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ :
ಸುಸಜ್ಜಿತ ಕಟ್ಟಡಗಳೊಂದಿಗೆ ಕ್ಯಾಂಪಸ್ನಲ್ಲಿಯೇ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯ ಅತ್ಯಾಧುನಿಕ ಕೊಠಡಿ, ಶೌಚಗೃಹವನ್ನು ಹೊಂದಿದೆ. ವಿದ್ಯಾರ್ಥಿನಿಯರ ಸುರಕ್ಷತೆಗೆ ಕಾಳಜಿವಹಿಸುವ ಸಂಸ್ಥೆಯಾಗಿ, ಡೈನಿಂಗ್ ಹಾಲ್, ಪೌಷ್ಟಿಕ ಸ್ವಾದಿಷ್ಟ ಆಹಾರ ಮತ್ತು ವಿಶೇಷವಾಗಿ ಶುಚಿತ್ವದ ಕಡೆ ಹೆಚ್ಚಿನ ಗಮನ ವಹಿಸಲಾಗುತ್ತದೆ. ಪ್ರತಿ ವಾರಕ್ಕೆ ಮೂರು ಬಾರಿ ವೈದ್ಯರ ಭೇಟಿ, ಬೆಳಗ್ಗೆ ಹಾಗೂ ರಾತ್ರಿ ಅಧ್ಯಯನಕ್ಕೆ ವಿಶೇಷ ಅವಧಿಯನ್ನು ಕಾಯ್ದಿರಿಸಲಾಗಿದೆ. ವಿದ್ಯಾರ್ಥಿನಿಯರ ಹಾಸ್ಟೆಲ್ ನ ಸಂಪೂರ್ಣ ಜವಾಬ್ದಾರಿಯನ್ನು ಸಂಸ್ಥೆಯ ಕಾರ್ಯದರ್ಶಿ ಅಡ್ವಕೇಟ್ ಸ್ವಪ್ನಾ ಎನ್ ಶೆಟ್ಟಿ ನಿರ್ವಹಿಸುತ್ತಿರುವುದು ಸಂಸ್ಥೆಯ ವಿಶೇಷತೆಗಳಲ್ಲೊಂದು.
ತಜ್ಞ ಶಿಕ್ಷಕರ ತಂಡ :
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ವಿಷಯ ತಜ್ಞ ಉಪನ್ಯಾಸಕರ ತಂಡವನ್ನು ಹೊಂದಿದೆ. KCET / NEET | JEE MAIN ಮುಂತಾದ ತರಬೇತಿಯ ಶಿಕ್ಷಣವನ್ನು ನೀಡಲಾಗುತ್ತಿದೆ.
ಕೆಸಿಇಟಿ ಪರೀಕ್ಷೆಯಲ್ಲಿ ರ್ಯಾಂಕ್:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ರ್ಯಾಂಕ್ ಪಡೆದಿರುವುದು ಸಂಸ್ಥೆಯ ಶಿಕ್ಷಣದ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿ. ವಿಜ್ಞಾನ ವಿಭಾಗದಲ್ಲಿ ರಾಯಿಸಾ ರಾಜ್ಯಕ್ಕೆ 3ನೇ ಸ್ಥಾನ ಉಡುಪಿ ಪ್ರಥಮ ಪಡೆದು ಜಿಲ್ಲೆಗೆ ಸ್ಥಾನಿಯಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ತಸ್ಮಿಯಾ ರಾಜ್ಯಕ್ಕೆ ಐದನೇ ಸ್ಥಾನ ಪಡೆದು, ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಎಸ್ಆರ್ ಶಿಕ್ಷಣ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಗಳು. ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡಿದ ಫಲವಾಗಿ ಅದಿತಿ ಎನ್. ಪೈ, ಕೆಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 22ನೇ ರ್ಯಾಂಕ್ ಪಡೆದಿರುವುದು ಸಂಸ್ಥೆಯ ಹೆಗ್ಗಳಿಕೆ. ರೋಹಿತ್ ಕಾರಂತ್ 2022ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ 25 ವರ್ಷಗಳ ಸಾರ್ಥಕ ಸೇವೆ ಮಾಡಿದ್ದಕ್ಕೆ ಸಂತೋಷವಿದೆ. ಇ ಲೈಬ್ರರಿ ವಿದ್ಯಾರ್ಥಿಗಳ ಕಲಿಯುವಿಕೆಗೆ ಇನ್ನಷ್ಟು ಅವಕಾಶ ನೀಡುತ್ತದೆ. ಕೇವಲ ನಾಲ್ಕು ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆಯಲ್ಲಿ ಇಂದು 2500 ವಿದ್ಯಾರ್ಥಿಗಳಿದ್ದಾರೆ. ಸಂಸ್ಥೆ ಸದಾ ಉತ್ಕೃಷ್ಟ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ಮಕ್ಕಳ ಭವಿಷ್ಯವನ್ನು ಬೆಳಗಿದೆ. ಸಂಸ್ಥೆಯ ಬೆಳವಣಿಗೆಯಲ್ಲಿ ಸಹಕರಿಸಿದ ಹೆತ್ತವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಧನ್ಯವಾದಗಳು. ಕೊರೋನ ಸಂದರ್ಭದಲ್ಲಿ ಸಿಇಟಿಯಲ್ಲಿ ರಾಜ್ಯಕ್ಕೆ 22ನೇ ರ್ಯಾಂಕ್ ಪಡೆದಿರುವುದು ಶ್ಲಾಘನೀಯ. ಪ್ರತಿ ವರ್ಷ ಎಸ್ ಎಸ್ ಎಲ್ ಸಿ, ಸಿಬಿಎಸ್ಸಿ ವಿಭಾಗದಲ್ಲಿ ಶೇಕಡ 100 ಫಲಿತಾಂಶ ಪಡೆದಿರುವುದು ದಾಖಲೆಯಾಗಿರುತ್ತದೆ.
ನಿರಂತರ ಶೇಕಡ 100 ಫಲಿತಾಂಶ :
ಎಸ್ಆರ್ ಆರಂಭ ದಿನಗಳಿಂದಲೂ ಶೇ.100 ಫಲಿತಾಂಶ ದಾಖಲಿಸುತ್ತ ಬಂದಿದೆ. ಸಂಸ್ಥೆ ಪದವಿ ಪೂರ್ವ ಕಾಲೇಜು, ಪಬ್ಲಿಕ್ ಸ್ಕೂಲ್ (ಸಿಬಿಎಸ್ಇ), ಪ್ರೌಢಶಾಲೆ(ರಾಜ್ಯ ಸಿಲೆಬಸ್) ವಿಭಾಗಗಳನ್ನು ಹೊಂದಿದ್ದು, ಎನ್ಟಿಎಸ್ಇ/ ಜೆಇಇ ಫೌಂಡೇಶನ್ ತರಗತಿಗಳನ್ನು 6-10ನೇ ತರಗತಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಡೆಸಲಾಗುತ್ತಿದೆ. ರಾಜ್ಯ ಹಾಗೂ ದೇಶದ ಭಾಗಗಳಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೈದ್ಯರಾಗಿ ಹಾಗೂ ಇಂಜಿನಿಯರ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಲವು ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಗಳಾದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಎಜೆ ಮೆಡಿಕಲ್ ಕಾಲೇಜು, ಹಾಸನ ಮೆಡಿಕಲ್ ಕಾಲೇಜು, ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಾದ ಆರ್ವಿ ಇಂಜಿನಿಯರಿಂಗ್ ಕಾಲೇಜು ನಿಟ್ಟೆ ಕಾಲೇಜಿನಲ್ಲಿ ಸರಕಾರಿ ಕೋಟದಡಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಅಟಲ್ ಟಿಂಕರಿಂಗ್ ಲ್ಯಾಬ್ :
6ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟದ ವೃದ್ಧಿಗಾಗಿ ಸ್ಪರ್ಧಾ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಸಲಕರಣೆಯೊಂದಿಗೆ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡಲು ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆ ಮಾಡಲಾಗಿದೆ.
ಇ-ಲೈಬ್ರರಿ: 80 ಲಕ್ಷ ರೂಪಾಯಿ ವೆಚ್ಚದಲ್ಲಿ ಇ ಲೈಬ್ರರಿಯನ್ನು ತೆರೆಯಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗಲಿದೆ.
ಹೆಚ್ ನಾಗರಾಜ ಶೆಟ್ಟಿ, ಅಧ್ಯಕ್ಷರು.
ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ.
ಸಂಪರ್ಕ: ಮೊಬೈಲ್: 9448373109, 9448604417,
9448724251,
ಇಮೇಲ್: [email protected]
ವೆಬ್ ಸೈಟ್ : www.sreduhebri.in
ಫೇಸ್ಬುಕ್ : srpuchebri