- ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ
- ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಬೆಂಗಳೂರು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕಾಲಮಿತಿಯ ಒಳಗೆ ಕ್ರಮ ಕೈಗೊಳ್ಳಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದ್ದರು ಪ್ರತಿಭಾವಂತ ಶಿಕ್ಷಕರು ಇಲಾಖೆಯ ಶಕ್ತಿ. ಖಾಲಿ ಇರುವ ಹುದ್ದೆಗಳಿಗೆ ನೇಮಕ ಅತಿಥಿ ಶಿಕ್ಷರನ್ನು ನೇಮಿಸಿಕೊಂಡರು ಅದು ತಾತ್ಕಾಲಿಕ ಪರಿಹಾರವಷ್ಟೆ, ಅದಕ್ಕಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಾಗುವುದು ಎಂದರು.
ಹಿಂದೆ ಸರ್ಕಾರದ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿದ್ದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆ ಆದ 13,351 ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು. ಕೆಲವರು ಮತ್ತೆ ಕೋರ್ಟ್ ಮೊರೆ ಹೋಗಿದ್ದು ಸ್ಥಳ ನಿಯೋಜನೆ ಆದೇಶ ನೀಡಲು ವಿಳಂಬವಾಗಿದೆ. ಕಾನೂನು ನೆರವು ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಪಠ್ಯ ಮಕ್ಕಳ ಹಿತಾಸಕ್ತಿಗೆ ತೀರ್ಮಾನ
ಪಠ್ಯ ಮಕ್ಕಳ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ.ಕಾಲಕ್ಕೆ ತಕ್ಕಂತೆ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ ಶೈಕ್ಷಣಿಕ ವರ್ಷದಲ್ಲಿ ಪಾಠಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡುತ್ತಿರುವುದು ಪಠ್ಯ ಕೇಸರಿಕರಣಕ್ಕೆ ತಡೆ ಎಂದು ಭಾವಿಸಬರದು. ಈ ಕುರಿತು ತಜ್ಞರು ಅಧಿಕಾರಿಗಳ