ಉನ್ನತ ವಿದ್ಯಾಭ್ಯಾಸ ಮಾಡಿದವರಿಗೆ ಗುಡ್ ನ್ಯೂಸ್!
– 4,055 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ
– ಏನೇನು ಅರ್ಹತೆ… ನೀವೂ ಅರ್ಜಿ ಸಲ್ಲಿಸಬಹುದೇ?
NAMMUR EXPRESS NEWS
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ ಸೂಚಿಸಿದೆ.
ಬಡ್ತಿ, ನಿಧನ, ವಯೋನಿವೃತ್ತಿ ಖಾಲಿ ಇರುವ ಹುದ್ದೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಹುದ್ದೆ ನೇಮಕ ಮಾಡಿಕೊಳ್ಳಬಹುದು ಎಂದು ಇಲಾಖೆಯು ಕಾಲೇಜುಗಳು, ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದೆ.
ತಿಂಗಳಿಗೆ 12 ಸಾವಿರ ರೂ ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ವರ್ಷ ನೇಮಕದ ಸಂದರ್ಭದಲ್ಲಿ ನಿಯಮಗಳ ಪಾಲನೆಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಬಾರಿ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಸ್ನಾತಕೋತ್ತರ ಪದವಿ ಮಾಡಿದವರಿಗೆ ಇಲಾಖಾ ಅರ್ಹತೆ ಮೇರೆಗೆ ಉದ್ಯೋಗ ಸಿಗಲಿದೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023