ಹೈಲೈಟ್ಸ್
ಆರ್.ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ.
ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ
ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ
ಬೆಂಗಳೂರು: ಸಿಇಟಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯಲ್ಲಿ ನಮೂದಿಸಿರುವ ಜಾತಿ/ ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆಡಿ ಸಂಖ್ಯೆಯನ್ನು ಕಂದಾಯ ಇಲಾಖೆಯ ಆರ್ .ಡಿ ಸಂಖ್ಯೆ ಜತೆ ನಮೂದಿಸುವ ಪ್ರಕ್ರಿಯೆ ಈಗ ನಡೆಯುತ್ತಿದೆ.
ಆದರೆ, ಸಾವಿರಾರು ಅಭ್ಯರ್ಥಿಗಳ ಈ ಸಂಖ್ಯೆಗಳು ನಾನಾ ಕಾರಣಗಳಿಗಾಗಿ ತಾಳೆಯಾಗದೆ ಇರುವ ಹಿನ್ನೆಲೆಯಲ್ಲಿ ಸೂಕ್ತ ತಿದ್ದುಪಡಿಗೆ ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆರ್ಡಿ ಸಂಖ್ಯೆಗಳು ತಿರಸ್ಕೃತ ತಗೊಂಡಿರುವ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನಾ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಹೆಸರು ಅಥವಾ ನಮೂದಿಸಿರುವ ಜಾತಿಯಲ್ಲಿ ವ್ಯತ್ಯಾಸ, ಪ್ರಮಾಣಪತ್ರ ಚಾಲ್ತಿಯಲ್ಲಿ ಇಲ್ಲದಿರುವುದು, ಅಭ್ಯರ್ಥಿಗಳ ಹೆಸರಿನಲ್ಲಿ ಪ್ರಮಾಣಪತ್ರ ಇಲ್ಲದಿರುವುದು ಅಥವಾ ನಿಗದಿತ ನಮೂನೆಗಳಲ್ಲಿ ಈ ಪ್ರಮಾಣಪತ್ರ ಪಡೆಯದೆ ಇರುವ ಕಾರಣಗಳಿಂದ ಹೀಗಾಗಿರುತ್ತದೆ. ಆದ್ದರಿಂದ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪ್ರಾಧಿಕಾರದ ಪೋರ್ಟಲ್ ತೆರೆಯಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಅಂಕ ದಾಖಲಿಸಲು ಅವಕಾಶ: ಸಿಬಿಎಸ್ಇ, ಸಿಐಎಸ್ಸಿಇ, ಐಜಿಸಿಎಸ್ಇ ಮುಂತಾದ ಪಠ್ಯಕ್ರಮಗಳಲ್ಲಿ 12ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮತ್ತು ಕರ್ನಾಟಕ ಪಠ್ಯಕ್ರಮದಲ್ಲಿ 2023ಕ್ಕೆ ಮೊದಲೇ ದ್ವಿತೀಯ ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಕೂಡ ತಮ್ಮ ಅಂಕಗಳ ವಿವರ ದಾಖಲಿಸಲು ಸಹ ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 9ರ ಸಂಜೆ 6ರವರೆಗೆ ಪ್ರಾಧಿಕಾರದ ಪೋರ್ಟಲ್ ಅನ್ನು ಮತ್ತೊಮ್ಮೆ ತೆರೆಯಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.