ಎಲ್ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ.!
– ಡ್ರಾಪ್ಔಟ್ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಕ್ರಮ
NAMMUR EXPRESS NEWS
ಬೆಂಗಳೂರು: ಮಕ್ಕಳನ್ನು ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು ವಯೋಮಿತಿಯನ್ನು ನಿಗದಿಪಡಿಸಿದೆ. ಆದರೆ, ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸದ ರಾಜ್ಯ ಸರ್ಕಾರವೀಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಅದರಂತೆ, 2023-24ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಎಲ್ಕೆಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸುವ ಮಕ್ಕಳ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಹೀಗಿದೆ ಪರಿಷ್ಕರಿಸಿದ ವಯೋಮಿತಿ:
ಮಕ್ಕಳನ್ನು ಎಲ್ಕೆಜಿಗೆ ಸೇರಿಸಲು 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿಯು 6 ವರ್ಷ ಆಗಿದೆ. ಯುಕೆಜಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ ಗರಿಷ್ಠ ವಯೋಮಿತಿಯಾಗಿದೆ. ಹಾಗೆಯೇ, ಒಂದನೇ ತರಗತಿಗೆ ಕನಿಷ್ಠ 6 ವರ್ಷ ಇದ್ದರೆ, ಗರಿಷ್ಠ 8 ವರ್ಷ ಇರಬೇಕಾಗುತ್ತದೆ. ಎಲ್ಕೆಜಿಗೆ 2023-24, ಯುಕೆಜಿಗೆ 2024-25 ಹಾಗೂ ಒಂದನೇ ತರಗತಿಗೆ 2025-26 ಶೈಕ್ಷಣಿಕ ಸಾಲಿನಿಂದ ಹೊಸ ಆದೇಶವು ಅನ್ವಯವಾಗಲಿದೆ. ಡ್ರಾಪ್ಔಟ್ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ಆದೇಶ ಹೊರಡಿಸಿದೆ.