Categories
ರಾಜ್ಯ ಶಿಕ್ಷಣ

ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ.!

ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ.!
– ಅಪರೂಪದ ಪ್ರಸಂಗಕ್ಕೆ ಯಾದಗಿರಿ ಸಾಕ್ಷಿ

NAMMUR EXPRESS NEWS
ಯಾದಗಿರಿ: ಎಸ್‌.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದೇ ಪರೀಕ್ಷೆ ಕೇಂದ್ರದಲ್ಲಿ ತಾಯಿ-ಮಗ ಒಟ್ಟಿಗೆ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗಕ್ಕೆ ಯಾದಗಿರಿ ಸಾಕ್ಷಿಯಾಗಿದೆ. ಹೌದು.. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ತಾಯಿ ಗಂಗಮ್ಮ (32) ಹಾಗೂ ಆಕೆಯ ಮಗನಾದ ಮಲ್ಲಿಕಾರ್ಜುನ ಒಂದೇ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವುದು ಅಪರೂಪದ ಕ್ಷಣವಾಗಿದೆ.

2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ತನ್ನ ಮಗನೊಟ್ಟಿಗೆ ಬರೆಯುತ್ತಿರುವುದು ಸಂತಸ ತಂದಿದೆ ಎಂದು ಗಂಗಮ್ಮ ಸಂತಸ ಹಂಚಿಕೊಂಡರು. ಮಗ ಮಲ್ಲಿಕಾರ್ಜುನ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, ಶಹಾಪುರ ತಾಲೂಕಿನ ಸಗರ ಪರೀಕ್ಷಾ ಕೇಂದ್ರದಲ್ಲಿ ತಾಯಿಯೊಡನೆ ಪರೀಕ್ಷೆ ಬರೆಯುತ್ತಿದ್ದಾನೆ. ಪ್ರಥಮ ಭಾಷೆ ಪರೀಕ್ಷೆಯಾಗಿದ್ದು, ಸರತಿ ಸಾಲಿನಲ್ಲಿ ನಿಂತು ತಾಯಿ ಗಂಗಮ್ಮ ಪರೀಕ್ಷಾ ನೋಂದಣಿ ಸಂಖ್ಯೆಯನ್ನು ಹುಡುಕಿ, ಪರೀಕ್ಷಾ ಕೊಠಡಿಗೆ ತೆರಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.