ಸಿದ್ದಾಪುರ ಚೇತನ ಕಾಲೇಜಿನಲ್ಲಿ ಪ್ರೇರಣಾ ಶಿಬಿರ ಯಶಸ್ವಿ!
– ಕ್ರಿಯೇಟಿವ್ ಪಿಯು ಕಾಲೇಜು ಕಾರ್ಕಳದಿಂದ ಆಯೋಜನೆ
– ಎಸ್ಎಸ್ಎಲ್ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಶಿಬಿರ
– ಉತ್ಸಾಹದಿಂದ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು
NAMMUR EXPRESS NEWS
ಸಿದ್ದಾಪುರ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಸಿದ್ದಾಪುರ ಚೇತನ ಕಾಲೇಜಿನಲ್ಲಿ ಪ್ರೇರಣಾ ಶಿಬಿರವನ್ನು ಆಯೋಜಿಸಲಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಸಿದ್ದಾಪುರದ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಚೇತನ ಕಾಲೇಜಿನಲ್ಲಿ ಆಯೋಜಿಸಿದ 3 ದಿನದ ಶಿಬಿರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಯಿತು. ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ ಉಪ ನಿರ್ದೇಶಕರಾದ ಪಿ ಬಸವರಾಜ್ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಮುಖ್ಯಸ್ಥರಾದ ವಿನಾಯಕ ಜೋಗ್ ಹಾಗೂ ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷರಾದ ಶಶಿಭೂಷಣ ಹೆಗಡೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ಮಾಡಿದರು. ಮಾ.7ರಂದು ನಿವೃತ್ತ ಶಿಕ್ಷಣಾಧಿಕಾರಿಗಳಾದ ಜೆಐ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭವು ನಡೆದಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಗಣಪತಿ ಕೆ.ಎಸ್ ಆಗಮಿಸಿದ್ದು ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಕಳೆದ ಐದಾರು ವರ್ಷದಿಂದ ನಿರಂತರವಾಗಿ ಉತ್ತರ ಕನ್ನಡ ಜಿಲ್ಲೆ ಶಿರಸಿ ಶಿಕ್ಷಣ ಜಿಲ್ಲೆಯಲ್ಲಿ ಪ್ರೇರಣಾ ಶಿಬಿರಗಳಿಗೆ ಸಹಕಾರ ನೀಡುತ್ತಿರುವ ಕಾರಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸುಮಾರು 5 ವರ್ಷಗಳಿಂದ ಶಿಬಿರಗಳಿಗೆ ವಿಶೇಷ ಸಹಕಾರ ಮತ್ತು ಮಾರ್ಗದರ್ಶನ ಮಾಡಿಕೊಂಡು ಬರುತ್ತಿದ್ದು, ಇಡೀ ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಈ ಶಿಬಿರ ಆಯೋಜನೆ ಮಾಡಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ ಹೆಚ್ ನಾಯಕ್ ಅವರ ನೇತೃತ್ವಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕ್ಲಾಸ್ ತೆಗೆದುಕೊಳ್ಳಲಾಯಿತು.