Categories
ಶಿಕ್ಷಣ

ನೀಟ್ ಫಲಿತಾಂಶ ಕ್ರಿಯೇಟಿವ್‌ ಕಾಲೇಜು ಸಾಧನೆ

  • ನೀಟ್ ಫಲಿತಾಂಶ: ಕ್ರಿಯೇಟಿವ್‌ ಕಾಲೇಜು ಸಾಧನೆ
  • ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಕ್ರಿಯೇಟಿವ್ ಕಾಲೇಜು ಬೆಸ್ಟ್
  • ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ

NAMMUR EXPRESS NEWS

ಕಾರ್ಕಳ: ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ನೀಟ್‌ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ NEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ್‌ ಶ್ರೀಕಾಂತ್‌ ಹೆಗಡೆ 641, ಸೋಹನ್‌ ಎಸ್‌ ನೀಲಕರಿ 598, ಸುದೀಪ್‌ ಅಸಂಗಿಹಾಲ್‌ 552, ಹಾಸನದ ವಿಕಾಸ್‌ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಈಗಾಗಲೇ ಬೋರ್ಡ್ ಪರೀಕ್ಷೆ, ಸಿಇಟಿ, ಜೆಇಇ ಸೇರಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಕಾಲೇಜು ಕರಾವಳಿಯಲ್ಲೇ ಅತ್ಯುತ್ತಮ ಸಾಧನೆ ಮಾಡಿದೆ. ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಿರಂತರವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನಡೆಯುತ್ತಿದೆ.

ಕಾಲೇಜಿನ ಪ್ರಥಮ ವರ್ಷದ ನೀಟ್‌ ಫಲಿತಾಂಶದಲ್ಲಿಯೇ ಪರೀಕ್ಷೆಗೆ ಕುಳಿತ 88 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ಅರ್ಹತೆಗಳಿಸಿದ್ದು, 23 ವಿದ್ಯಾರ್ಥಿಗಳು 400 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಈ ಮೊದಲು ಪ್ರಕಟಗೊಂಡ JEE, CET, NDA,NATA , RIE, C.A ಮತ್ತು C.S.E.E.T, ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿರುತ್ತಾರೆ.

ಆಡಳಿತ ಮಂಡಳಿ, ಉಪನ್ಯಾಸಕರ ಅಭಿನಂದನೆ

ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ನೀಟ್‌ ಸಂಯೋಜಕರಾದ ಲೋಹಿತ್‌ ಎಸ್‌ ಕೆ, ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.