Categories
ಕರಾವಳಿ ಮಂಗಳೂರು ಶಿಕ್ಷಣ

ರಾಜ್ಯಕ್ಕೆ 2ನೇ ರಾಂಕ್ ಪಡೆದ ನ್ಯೂ ವೈಬ್ರೆಂಟ್ ಪಿಯು ಕಾಲೇಜು

ರಾಜ್ಯಕ್ಕೆ 2ನೇ ರಾಂಕ್ ಪಡೆದ ನ್ಯೂ ವೈಬ್ರೆಂಟ್ ಪಿಯು ಕಾಲೇಜು
– ವಿಜ್ಞಾನ ವಿಭಾಗದಲ್ಲಿ ಧನುಷ್ ಗುತ್ತಿ ಎರಡನೇ ಸ್ಥಾನ
– ವಿದ್ಯಾರ್ಥಿಗಳ ಉತ್ತಮ ಸಾಧನೆ: ಕರಾವಳಿಯ ಪ್ರಮುಖ ಕಾಲೇಜು

ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮೂಡಬಿದರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಲ್ಲೂಕಿನ ವೈಬ್ರೆಂಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ವೈಬ್ರೆಂಟ್ ಕಾಲೇಜು ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳುವಲ್ಲಿ ಕೊಡುಗೆ ನೀಡಿದ್ದಾರೆ.

ಈ ಮೂಲಕ ರಾಜ್ಯದ ಪ್ರಮುಖ ಪದವಿ ಪೂರ್ವ ಕಾಲೇಜುಗಳಲ್ಲಿ ವೈಬ್ರೆಂಟ್ ಕೂಡ ಒಂದಾಗಿ ಗುರುತಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಧನುಷ್ ಗುತ್ತಿ ಅವರು 600ಕ್ಕೆ 598 ಅಂಕಗಳನ್ನು, ಸರಸ್ವತಿ ಎಂ ಎಸ್ ಅವರು 600ಕ್ಕೆ 593 ಅಂಕಗಳನ್ನು, ತಸ್ನೀಮ್ ಎಸ್.ಎಂ ಅವರು 600ಕ್ಕೆ 592 ಅಂಕಗಳನ್ನು ಪಡೆದುಕೊಂಡು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವೈಬ್ರೆಂಟ್ ಕಾಲೇಜಿನ ನಿರ್ದೇಶಕರು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.