Categories
ತೀರ್ಥಹಳ್ಳಿ ಮಲ್ನಾಡ್ ಶಿಕ್ಷಣ ಶಿವಮೊಗ್ಗ

ಪ್ರಜ್ಞಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

ಪ್ರಜ್ಞಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ
– ಪ್ರಯುಕ್ತ ಮೆಡೋಳಿಗೆ 9ನೇ ರ‍್ಯಾಂಕ್
– ಶಾಲೆಗೆ ಶೇ.100 ಫಲಿತಾಂಶ: 31 ಡಿಸ್ಟಿಂಕ್ಷನ್ ಅಭಿನಂದನೆಗಳು

ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ಪ್ರಜ್ಞಾ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ 2025-26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ. ಈ ಪರೀಕ್ಷೆಯಲ್ಲಿ ಕು. ಪ್ರಯುಕ್ತ ಮೆದೋಳಿಗೆ 625ಕ್ಕೆ 617 ಅಂಕ ಪಡೆದು ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದರೆ, ಕು. ಅವನಿ 615, ಕು. ಕನ್ನಿಕಾ ಆರ್ ಉಡುಪ 605, ಕು. ಬೃಂದಾ ಜಿ. ಎನ್ 604 ಹಾಗೂ ನಾರಾಯಣಿ ಕೆ ಭಟ್ 602 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ .

ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಪೋಷಕರ ಪರಿಶ್ರಮವನ್ನು ಆಡಳಿತ ಮಂಡಳಿ ಶ್ಲಾಘಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.