ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ.!
– ರಾಜ್ಯಮಟ್ಟದ 9ನೇ ರ್ಯಾಂಕ್ ಪಡೆದ ಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಿಯ
– ಕಾಲೇಜು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ವೈ ಸಾಕ್ಷತ್
NAMMUR EXPRESS NEWS
ಹೆಬ್ರಿ: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಬ್ರಿಯ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರಿಯ ಆಚಾರ್ ಅವರು ಮರುಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ 5 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳುವುದರ ಮೂಲಕ ಒಟ್ಟು 589 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಈ ಮೂಲಕ ಸಂಸ್ಥೆಯು ರಾಜ್ಯಮಟ್ಟದ 3 ರ್ಯಾಂಕ್ ಗಳನ್ನು ತನ್ನದಾಗಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ವೈ ಸಾಕ್ಷತ್ ಶೆಟ್ಟಿ ಇವರು ಕನ್ನಡ ವಿಷಯದಲ್ಲಿ 7 ಅಂಕಗಳನ್ನು ಹೆಚ್ಚುವರಿಯಾಗಿ ಪಡೆಯುವುದರ ಮೂಲಕ ಒಟ್ಟು 587 ಅಂಕಗಳನ್ನು ಪಡೆದು ಕಾಲೇಜು ಮಟ್ಟದಲ್ಲಿ ತೃತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್. ಶೆಟ್ಟಿಯವರು ಅಭಿನಂದಿಸಿದ್ದಾರೆ.