- ಶಾಲೆ ಯಾವಾಗ… ಶೈಕ್ಷಣಿಕ ಅವಧಿ ಏನು?
- ಸರ್ಕಾರದಿಂದ ನಿಯಮಗಳು ಏನು..?
NAMMUR EXPRESS NEWS
ಬೆಂಗಳೂರು : ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಾಲಾ ಕರ್ತವ್ಯದ ದಿನಗಳು
2023ರ ಮೇ 29ರಿಂದ ಅಕ್ಟೋಬರ್ 7, ಅ.25ರಿಂದ 2024ರ ಏ.10ರವರೆಗೆ
ರಜೆ ದಿನಗಳು
ಮಧ್ಯಂತರ ರಜೆ 2023ರ ಅಕ್ಟೋಬರ್ 8 ರಿಂದ 24 ಬೇಸಿಗೆ ರಜೆ 2024ರ ಏ.11 ರಿಂದ ಮೇ 28 ರವರೆಗೆ ಇರಲಿದೆ.