ಹೈಲೈಟ್ಸ್:
- ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ 2023.
- ಪ್ರವೇಶ ಪರೀಕ್ಷೆ ಮೆರಿಟ್ ಪಟ್ಟಿ ಬಿಡುಗಡೆ.
- ಮೆರಿಟ್ ಪಟ್ಟಿ ಚೆಕ್ ಮಾಡಲು ಲಿಂಕ್ ಇಲ್ಲಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.
ಈ ಪ್ರವೇಶ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮೆರಿಟ್ ಪಟ್ಟಿಯನ್ನು ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದಾಗಿದೆ.
ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ. ಆರ್. ಅಂಬೇಡ್ಕರ್ , ಮಾಸ್ತಿ ವೆಂಕಟೇಶ ಅಯ್ಯಂಗರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು, ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2023-24ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು.
6ನೇ ತರಗತಿ ಪ್ರವೇಶ ಪರೀಕ್ಷೆ ಮೆರಿಟ್ ಪಟ್ಟಿ ಚೆಕ್ ಮಾಡುವ ವಿಧಾನ
- ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಪ್ರವೇಶ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರವೇಶ 2023 ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆಗ ನಿಮಗೆ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ. ಆ ಪುಟದಲ್ಲಿ ಕ್ರೈಸ್ 2023 ಮೆರಿಟ್ ಪಟ್ಟಿ ಎಂಬಲ್ಲಿ ಕ್ಲಿಕ್ ಮಾಡಿ.
- ನಂತರ ನಿಮಗೆ ಪರದೆಯ ಮೇಲೆ ಮೆರಿಟ್ ಪಟ್ಟಿಯ ಪಿಡಿಎಫ್ ಓಪನ್ ಆಗುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.