- ಮೇ ತಿಂಗಳಿನಲ್ಲಿ “PUC” ಜೂನ್ ನಲ್ಲಿ “SSLC” ಪರೀಕ್ಷೆ
-ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ
ಬೆಂಗಳೂರು: ರಾಜ್ಯದಲ್ಲಿ ದ್ವೀತಿಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳಿಗೆ ದಿನಾಂಕಗಳನ್ನ ನಿಗದಿ ಮಾಡಲಾಗಿದ್ದು, ‘ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನ ಆಯೋಜನೆ ಮಾಡಲಾಗುತ್ತೆ’ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ‘ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯ ವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಇನ್ನು ಪರೀಕ್ಷೆಗಳನ್ನ ಯಾವ ರೀತಿ ನಡೆಸಬೇಕು ಅಂತ ಎಸ್ಎಸ್ಎಲ್ಸಿ ಮತ್ತು ಪಿಯು ಬೋಡ್೯ಗಳು ತೀಮಾ೯ನಿಸುತ್ತವೆ ಎಂದರು.