ಸೀಬಿನಕೆರೆ ಶಾಲೆಯಲ್ಲಿ ಪ್ರಾರಂಭೋತ್ಸವದ ರಂಗು!
– ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ಶಿಕ್ಷಣಾಧಿಕಾರಿ ಗಣೇಶ್
– ತಾಲೂಕಿನಲ್ಲಿ ಅತಿ ಹೆಚ್ಚು ದಾಖಲಾತಿ ಹೊಂದುತ್ತಿರುವ ಸರ್ಕಾರಿ ಶಾಲೆ!
– ಆರಗ ದತ್ತು ಪಡೆದ ಶಾಲೆ: ಶಾಲಾ ಆಡಳಿತ ಮಂಡಳಿ ಉತ್ತಮ ಸೇವೆ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಜರುಗಿತು. ತೀರ್ಥಹಳ್ಳಿ ತಾಲೂಕಿನಲ್ಲೇ ವಿಭಿನ್ನವಾಗಿ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಪೋಷಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಣೇಶ ಅವರು ಆಗಮಿಸಿದ್ದು ಶಾಲೆಯ ಪ್ರಗತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಹಾಗೆಯೇ ಶಾಲಾ ಅಭಿವೃದ್ಧಿಗೆ ಸದಾ ಕೈಜೋಡಿಸುವುದಾಗಿ ತಿಳಿಸಿದರು. ದೈಹಿಕ ಪರಿವೀಕ್ಷಕರಾದ ಚಂದ್ರಪ್ಪ ಕೂಡ ಉಪಸ್ಥಿತರಿದ್ದರು.
ಶಿಕ್ಷಣಾಧಿಕಾರಿ ಗಣೇಶ್ ಕೇಕ್ ಕತ್ತರಿಸುವ ಮೂಲಕ ಮಕ್ಕಳಿಗೆ ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು. ತಾಲೂಕಿನಲ್ಲಿ ಅತಿ ಹೆಚ್ಚು ದಾಖಲಾತಿ ಹೊಂದುತ್ತಿರುವ ಶಾಲೆಯನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಸಾವಿತ್ರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ದತ್ತಣ್ಣ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ರಾಮದಾಸ್ ಪ್ರಭು ಹಾಗೂ ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಜೇಶ್ ಮೊಗವೀರ್ ಹಾಗೂ ಸದಸ್ಯರು, ಚಾಮುಂಡೇಶ್ವರಿ ನಾಗರಾಜ್ ಸೇರಿ ಪೋಷಕರು, ಸ್ಥಳೀಯರು, ಸಿಬ್ಬಂದಿ ಉಪಸ್ಥಿತರಿದ್ದರು.