- ಮತ್ತೆ ಆನ್ಲೈನ್ ಶಿಕ್ಷಣದ ಮೊರೆ ಹೋದ ಸರ್ಕಾರ
- ಆನ್ಲೈನ್ ಶಿಕ್ಷಣಕ್ಕೆ ಓಕೆ ಎಂದ ಸರ್ಕಾರ
ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆಯ ಮಹಾತ್ವಾಕಾಂಕ್ಷಿ ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು ಮತ್ತೆ ಆನ್ಲೈನ್ ಶಿಕ್ಷಣದ ಮೊರೆ ಹೋಗಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಗಮ ಸ್ಥಗಿತಗೊಂಡಿರುವ ಬೆನ್ನಲ್ಲಿಯೇ ಖಾಸಗಿ ಶಾಲೆಗಳಲ್ಲಿ ಆನ್ಲೈನ್ ತರಗತಿಗಳು ಮುಂದುವರೆದಿವೆ.
ಆದರೆ ಆನ್ಲೈನ್ ತರಗತಿಗಳಿಂದ ಮಕ್ಕಳ ಆರೋಗ್ಯ ಮೇಲೆ ಆಗುತ್ತಿರುವ ಪರಿಣಾಮ ನಿಧಾನವಾಗಿ ಹೆಚ್ಚಾಗುತ್ತಿದೆ. ಇದು ಶಿಕ್ಷಣ ಇಲಾಖೆಯ ಗಮನಕ್ಕೂ ಬಂದಿದೆ. ಹೀಗಾಗಿ ಆನ್ಲೈನ್ ಶಿಕ್ಷಣದ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಆದೇಶ ಮಾಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಆನ್ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳ ಕಣ್ಣಿಗೆ ಹೆಚ್ಚಾಗಿ ತೊಂದರೆ ಆಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುತ್ತದೆ.
ಆನ್ಲೈನ್ ಶಿಕ್ಷಣ ಮಾದರಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ಧಪಡಿಸಲಾಗಿದೆ. ಈ ವರದಿ ಆಧಾರದ ಮೇರೆಗೆ ರಾಜ್ಯದ ಎಲ್ಲಾ ಶಾಲೆಗಳು ಆನ್ಲೈನ್ ಶಿಕ್ಷಣ ನಡೆಸುವಂತೆ ವಿವರವಾದ ಸುತ್ತೋಲೆಯನ್ನು ಇಂದೇ ಹೊರಡಿಸಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಇಲಾಖಾ ಆಯುಕ್ತರಿಗೆ ಸೂಚಿಸಿದ್ದಾರೆ.