- ಐಐಟಿ ಬಾಂಬೆ ನಡೆಸಿದ ಪರೀಕ್ಷೆಯಲ್ಲಿ ಇಶಾನ್ ಅವರಿಗೆ ರ್ಯಾಂಕ್
- ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ
NAMMUR EXPRESS NEWS
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಇಶಾನ್ ಪಿ ಸುಬ್ಬಾಪುರ್ ಮಠ್ ಐಐಟಿ ಬಾಂಬೆ ನಡೆಸಿದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವ ಮೂಲಕ ನಾಡಿಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವೃತ್ತಿ ಶಿಕ್ಷಣ ತರಬೇತಿ ನೀಡುವ ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆ IIT ಬಾಂಬೆಯವರು ನಡೆಸಿದ UCEED ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಇಶಾನ್ ಪಿ ಸುಬ್ಬಾಪುರ 95.53 ಅಂಕ ಗಳಿಸಿ ಆಲ್ ಇಂಡಿಯಾ ರಾಂಕ್ ನಲ್ಲಿ 1919ನೇ ಸ್ಥಾನ ಪಡೆದಿರುತ್ತಾನೆ. IITಯಲ್ಲಿ ಡಿಸೈನ್ಸ್ ಕೋರ್ಸ್ ಪ್ರವೇಶಾತಿಗಾಗಿ ಜನವರಿ 2023ರಲ್ಲಿ ನಡೆದ ಪರೀಕ್ಷೆಯಲ್ಲಿ ಇಶಾನ್ ಅತ್ಯುತ್ತಮ ಅಂಕಗಳಿಸುವ ಮೂಲಕ ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.