- ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಕೆ
- ಮಾರ್ಚ್ 27ರಂದು ಪ್ರಕರಣದ ವಿಚಾರಣೆ
NAMMUR EXPRESS NEWS
ಬೆಂಗಳೂರು: ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಹೈಕೋರ್ಟ್ ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. 5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಆದರೆ ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿವೆ.
5 ಮತ್ತು 8 ನೇ ತರಗತಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ ಎಂದು ವರದಿಯಾಗಿದೆ.