ಗೌರಿ – ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!
– ನಿರಂತರ ಗಾಳಿ ಜತೆಗೆ ಭಾರಿ ಮಳೆ ಎಚ್ಚರಿಕೆ
– ಮುಂದಿನ ಮೂರು ದಿನ ಬಾರಿ ಮಳೆಯಾಗುವ ಮುನ್ಸೂಚನೆ
NAMMUR EXPRESS NEWS
ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ಗುರುವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
– ಗೌರಿ-ಗಣೇಶ ಹಬ್ಬಕ್ಕೆ ಮಳೆಯಾಟ
ಸೆ.6-7ರಂದು ಗೌರಿ -ಗಣೇಶ ಹಬ್ಬದಂದು ಮಳೆಯು ಅಬ್ಬರಿಸಲಿದೆ. ಶುಕ್ರವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಾಧ್ಯತೆ ಹೆ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.