ಹಾವಿನಿಂದ ಮನೆಯವರನ್ನು ರಕ್ಷಿಸಿದ ಬೆಕ್ಕು!
– ಗದಗದಲ್ಲಿ ನಡೆದ ಕುತೂಹಲಕಾರಿ ಘಟನೆ
– ಅಡುಗೆ ಮನೆಯಲ್ಲೇ ಕುಳಿತಿದ್ದ ನಾಗರಹಾವು
NAMMUR EXPRESS NEWS
ಗದಗ: ಬೆಕ್ಕುಗಳು ವಿಷಕಾರಿ ಹಾವಿನಿಂದ ಕುಟುಂಬಸ್ಥರನ್ನು ಬಚಾವ್ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದ್ದು ಅಚ್ಚರಿ ಮೂಡಿಸಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷಕಾರಿ ನಾಗರಹಾವು ಅಡುಗೆ ಮನೆಗೆ ಸೇರಿದೆ. ಹಾವು ಸೇರಿದ್ದನ್ನು ಮನೆಯಲ್ಲಿ ಇದ್ದ ಜೋಡಿ ಬೆಕ್ಕುಗಳು ನೋಡಿವೆ. ಮನೆ ಮಾಲೀಕರು ಆಗಮಿಸುತ್ತಿದ್ದಂತೆಯೇ ಅಡುಗೆ ಮನೆ ಬಳಿ ಎರಡು ಬೆಕ್ಕುಗಳು ನಿಂತು ಮೆಂವ್….ಮೆಂವ್…ಅಂತ ಅಂದಿವೆ.
ಇದರಿಂದಾಗಿ ಮನೆ ಮಾಲೀಕರು ಬೆಕ್ಕುಗಳ ವರ್ತನೆಯಿಂದ ಗಾಬರಿಯಾಗಿ ಕಣ್ಣಾಡಿಸಿದಾಗ ಹಾವು ಇರುವುದು ಗೊತ್ತಾಗಿದೆ. ತಕ್ಷಣವೇ ಉರಗ ತಜ್ಞ ಸುರೇಬಾನ ಅವರನ್ನು ಕರೆಸಿ ನಾಗರಹಾವು ಹಿಡಿಸಿದ್ದಾರೆ.
ಅಡುಗೆ ಮನೆಯಲ್ಲಿ ಇದ್ದ ನಾಗರಹಾವು ಖಾಲಿ ಡಬ್ಬಾ ಸೇರುತ್ತಿದ್ದಂತೆಯೇ ಕುಟುಂಬ ಸದಸ್ಯರು ನಿಟ್ಟುಸಿರು ಬಿಟ್ಟರು. ಅಷ್ಟೇ ಅಲ್ಲ ಸೆರೆ ಸಿಕ್ಕ ನಾಗರಹಾವಿಗೆ ವಿಭೂತಿ, ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ನಂತರ ನಾಗರಹಾವು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ. ಒಟ್ಟಿನಲ್ಲಿ ಪ್ರಾಣಿಗಳ ಈ ಕೆಲಸ ಮಾದರಿ ಆಗಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
HOW TO APPLY : NEET-UG COUNSELLING 2023