ಹಾಸನ ಜಿಲ್ಲೆಯ 5 ತಾಲೂಕು ಶಾಲೆಗೆ ರಜೆ!
– ಹಾಸನ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ನದಿಗಳು
– ಮಳೆಯಲ್ಲೇ ಬಸ್ ಮರಕ್ಕೆ ಡಿಕ್ಕಿ: ಓರ್ವ ಸಾವು
– ಕೊಡಗು, ಮೈಸೂರು ಭಾಗದಲ್ಲಿ ಧಾರಾಕಾರ ಮಳೆ
NAMMUR EXPRESS NEWS
ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.
ಕಳೆದ ಎರಡು ದಿನದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ
ಹಾಸನ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆಯನ್ನು ಡಿಸಿ ಸತ್ಯಭಾಮ ಮಾಡಿದ್ದಾರೆ.
ಮಳೆ ಕಾರಣ ಅಪಘಾತ: ಮರ ಡಿಕ್ಕಿ ಹೊಡೆದು ಓರ್ವ ಸಾವು
ಹಾಸನದ ಮಂಗಳೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾರಿಗೆ ಬಸ್ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ವ್ಯಕ್ತಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023