ಹಾಸನದ ಎಪಿಜೆ ಕಾಲೇಜಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
– ಜಿಲ್ಲೆಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸ್ಪರ್ಧೆ
– ಅಚ್ಚುಕಟ್ಟಿನ ಆಯೋಜನೆ: ಪೋಷಕರ ಮೆಚ್ಚುಗೆ
NAMMUR EXPRESS NEWS
ಹಾಸನ: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ನಗರದ ಅರಸೀಕೆರೆ ರಸ್ತೆ ಬಿ.ಕಾಟೀಹಳ್ಳಿಯ ಎಪಿಜೆ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ನಡೆಯುತ್ತಿದೆ.
ಬೆಳಿಗ್ಗೆ 9 ಗಂಟೆಗೆ ಎಪಿಜೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜನೆ ಮಾಡಿದ್ದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಾವು ಕಲಿತಿರುವ ಕರಾಟೆಯ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಇದಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಹದೇವ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಪಾಲಾಕ್ಷ ಹೆಚ್.ಆರ್.ಮತ್ತು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ. ಹರೀಶ್ ಮೊದಲಾದವರು ಭಾಗವಹಿಸಿದ್ದರು.
ಉದ್ಘಾಟನೆ ನೆರವೇರಿಸಿದ ಎಪಿಜೆ ಕಾಲೇಜಿನ ಕಾರ್ಯದರ್ಶಿ ಡಿ.ಮುರುಳಿ ಅವರು ಮಾತನಾಡಿ, ಕರಾಟೆ ತುಸು ಕಟ್ಟದ ಕ್ರೀಡೆ. ಈ ಕ್ರೀಡೆ ಅಭ್ಯಾಸ ಮಾಡುವವರು ಎಲ್ಲಾ ರೀತಿಯ ಎಚ್ಚರಿಕೆ ವಹಿಸಬೇಕಾಗುತ್ತದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದರೆ ಉತ್ತಮ ಸಾಧನೆ ಸಾಧ್ಯ ಎಂದು ಎಲ್ಲರಿಗೂ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕರಾಟೆ ಸ್ಪರ್ಧೆ ನಡೆಸಿಕೊಡಲು ವಶಿನವ ಶೋರಿನ್ ಯು ಶೋರಿನ್ ಕಾಯ್ ಜಪಾನ್, ಸಂಸ್ಥೆಯ ಅಧ್ಯಕ್ಷ ದೀಪಕ್ ಹೆಚ್.ಕೆ ಹಾಗೂ ಸಂಸ್ಥೆಯ ತರಬೇತಿದಾರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಎಪಿಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.