Categories
ಹಾವೇರಿ

ಭದ್ರಾವತಿಯ 13 ಮಂದಿ ಅಪಘಾತಕ್ಕೆ ಬಲಿ!

ಭದ್ರಾವತಿಯ 13 ಮಂದಿ ಅಪಘಾತಕ್ಕೆ ಬಲಿ!

– ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 13 ಮಂದಿ ದುರ್ಮರಣ
– ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿ
– ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ!

NAMMUR EXPRESS NEWS
ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತರು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ.
ಇವರು ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತ ದುರ್ದೈವಿಗಳು. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ.

ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿ
– ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ!

ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮೃತ ದುರ್ದೈವಿ ಕೃಷ್ಟಪ್ಪ(62) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಈತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟಿಟಿಯಲ್ಲಿ ಸಿಲುಕಿಕೊಂಡಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಟ್ಟರು.
ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.