ಶೃಂಗೇರಿ: ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿದುಶೇಖರ ಭಾರತೀ ಮಹಾಸ್ವಾಮಿಗಳ 34 ನೇ ವರ್ಧಂತೋತ್ಸವದ ಪ್ರಯುಕ್ತ ರಕ್ತದಾನಿಗಳು ವಾಟ್ಸ್ ಆ್ಯಪ್ ಗ್ರೂಪ್ ಹಾಗೂ ಕಾರ್ಮಿಕ ಮಿತ್ರ ಬಳಗವು ಅಭಿನವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೃಂಗೇರಿ ಮತ್ತು ರೋಟ್ರಾಕ್ಟ್ ಕ್ಲಬ್ ಇವರ ಸಹಯೋಗದಲ್ಲಿ ಆಗಸ್ಟ್ 19 ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಿದೆ. ಶೃಂಗೇರಿಯ ಶ್ರೀಮಠದ ಶಾರದಾ ಕೃಪಾದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ಎಲ್ಲಾ ರಕ್ತದಾನಿಗಳು,ಆಸಕ್ತರು ಬಂದು ರಕ್ತದಾನ ಮಾಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.







