- ಎನ್.ಆರ್.ಪುರದಲ್ಲಿ ಕರೋನಾಗೆ ಬಲಿ!
ನರಸಿಂಹರಾಜಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬಳು ಕರೋನಾಕ್ಕೆ ಬಲಿಯಾಗಿದ್ದಾರೆ.
ಧನಲಕ್ಷ್ಮಿ ಎಂಬಾಕೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದು, ಈಕೆ 15 ವರ್ಷದಿಂದ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಕರೋನಾ ಪಾಸಿಟಿವ್ ಬಂದಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.