- ನವೆಂಬರ್ ಮಧ್ಯಂತರದಲ್ಲಿ 10 ಲಕ್ಷ ಕೇಸ್?
- ಭಾರತದಲ್ಲಿ 70 ಲಕ್ಷ ಕೇಸ್: 1.15 ಲಕ್ಷ ಸಾವು
ಬೆಂಗಳೂರು: ಭಾರತದಲ್ಲಿ ಕರೋನಾ ದಿನೇ ದಿನೇ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ನವೆಂಬರ್ ಮಧ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 10 ಲಕ್ಷ ದಾಟಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರೂ ಕೂಡ ರಾಜ್ಯಲ್ಲಿ ಕಡಿಮೆಯಾಗಿಲ್ಲ. ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿದಾಟಲಿದೆ, ಮೃತರ ಸಂಖ್ಯೆ 12,800ಕ್ಕೆ ತಲುಪಲಿದೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ವ್ಯಾಪಕವಾಗುತ್ತಿದ್ದು, ನಗರದಲ್ಲಿ ಗರಿಷ್ಠ ಸಂಖ್ಯೆಯ ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.8ಪಾಲನ್ನು ಬೆಂಗಳೂರು ಹೊಂದಿದೆ. ಇದರಂತೆ ನವೆಂಬರ್ ವೇಳೆಗೆ ಪ್ರಕರಣಗಳ ಸಂಖ್ಯೆ 4.2 ಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಮುಂದಿನ4-6 ವಾರಗಳಲ್ಲಿ ಬೆಂಗಳೂರು ನಗರಕ್ಕೆ 13,000 ಆಮ್ಲಜನಕ ಹಾಸಿಗೆಗಳು, 10,000 ಐಸಿಯು ಹಾಸಿಗೆಗಳು ಮತ್ತು 6,500 ವೆಂಟಿಲೇಟರ್ಗಳ ಅಗತ್ಯತೆ ಬೀಳಬಹುದು ಎಂದು ಹೇಳಲಾಗುತ್ತಿದೆ.
ಮಾರ್ಚ್ 8 ರಂದು ಮೊದಲ ಕೊವಿಡ್ 19 ಪ್ರಕರಣ ಪತ್ತೆ ಕರ್ನಾಟಕದಲ್ಲಿ ಮಾ. 8ರಂದು ಮೊದಲ ಕೊವಿಡ್ ಪ್ರಕರಣ ವರದಿಯಾಗಿತ್ತು. ಎಂಟು ತಿಂಗಳು ಕಳೆಯುವ ಮುನ್ನವೇ ಸೋಂಕಿತರ ಸಂಖ್ಯೆ 7.58 ಲಕ್ಷಕ್ಕೆ (ಅ.17) ತಲುಪಿದೆ. ಅದೇ ರೀತಿ, ಮೃತರ ಸಂಖ್ಯೆ 10,500ರ ಗಡಿ ದಾಟಿದೆ.
ಆಗಸ್ಟ್ನಲ್ಲಿ ಎಷ್ಟು ಇತ್ತು ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,19,926ಕ್ಕೆ ತಲುಪಿತ್ತು. ಸೆಪ್ಟೆಂಬರ್ 12ರ ವೇಳೆಗೆ ದುಪ್ಪಟ್ಟಾಗಿ 4,40,411ಕ್ಕೆ ಏರಿಕೆಯಾಗಿತ್ತು. ಅಕ್ಟೋಬರ್ 12ರ ವೇಳೆಗೆ ಈ ಸಂಖ್ಯೆ 7,17,915ಕ್ಕೆ ತಲುಪಿತ್ತು. ಹೀಗಾಗಿ, ನ.12ಕ್ಕೆ ಕೋವಿಡ್ ಪ್ರಕರಣಗಳು 10 ಲಕ್ಷದ ಗಡಿ ದಾಟಲಿದೆ ಎಂದು ಸಂಸ್ಥೆ ಅಂದಾಜಿಸಿದೆ. ಆಗಸ್ಟ್ 15ರಂದು 3,931 ಇದ್ದ ಮೃತರ ಸಂಖ್ಯೆ ಬಳಿಕ ಏರಿಕೆ ಕಂಡು, ಅ. 12ಕ್ಕೆ 10 ಸಾವಿರದ ಗಡಿ ದಾಟಿತ್ತು. ಇದರ ಅನುಸಾರವೇ ಮರಣ ಪ್ರಕರಣಗಳನ್ನು ಸಂಸ್ಥೆ ಲೆಕ್ಕ ಹಾಕಿದೆ.