- ಒಂದು ದಿನದಲ್ಲಿ 32 ಮಂದಿ ಕೊರೋನಾಗೆ ಬಲಿ
- ಬೆಂಗಳೂರು ಒಂದರಲ್ಲೇ 2,468 ಹೊಸ ಪ್ರಕರಣ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ 8 ಲಕ್ಷದ ಗಡಿ ದಾಟಿದೆ. ಭಾನುವಾರ 4,439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ವೈರಸ್ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 2468 ಮಂದಿ ಸೇರಿದಂತೆ ರಾಜ್ಯದಲ್ಲಿ 4439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,02817ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 32 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,905ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,468 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,25,773ಕ್ಕೆಕ್ಕೆ ಏರಿಕೆಯಾಗಿದೆ. ನಗರದಲ್ಲಿ ಭಾನುವಾರ 20 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
10,106 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,10,843ಕ್ಕೆ ಏರಿಕೆಯಾಗಿದೆ. 81,050 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಂದು ಕಡೆ ಕರೋನಾ ಕಡಿಮೆಯಾಗುತ್ತಿದೆ ಎಂದು ಜನತೆ ಭಯಬಿಟ್ಟಿದ್ದಾರೆ. ಒಂದು ಕಡೆ ಮಳೆ ಆಗಮನವಾಗುತ್ತಿದೆ. ಇತ್ತ ಕರೋನಾ ಕಡಿಮೆ ಆಗಿದೆ ಎಂದರೂ ಅಪಾಯದ ಬಗ್ಗೆ ಎಚ್ಚರ ಅಗತ್ಯ!.