- ಯಾರನ್ನೂ ಕಡೆಗಣಿಸುವುದಿಲ್ಲ: ಮೋದಿ ಭರವಸೆ
ನವ ದೆಹಲಿ: ದೇಶದ ಪ್ರತಿಯೊಬ್ಬರಿಗೂ ಕರೋನಾ ಲಸಿಕೆ ಪೂರೈಕೆಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಯಾರನ್ನೂ ಕಡೆಗಣಿಸದೆ ಎಲ್ಲರಿಗೂ ಲಸಿಕೆ ಪೂರೈಸಲಾಗುವುದು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಮೋದಿ,”ಲಸಿಕೆ ಲಭ್ಯವಾದ ತಕ್ಷಣ ನಾವು ಎಲ್ಲರಿಗೂ ಲಸಿಕೆ ಒದಗಿಸಲಿದ್ದೇವೆ. ಯಾರನ್ನೂ ಮರೆಯುವುದಿಲ್ಲ..ಕಡೆಗಣಿಸುವುದಿಲ್ಲ ಎಂಬ ಭರವಸೆ ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಮೊದಲು ಕರೋನಾ ವಾರಿಯರ್ಸ್ ಲಸಿಕೆ ನೀಡಲು ಗಮನ ಹರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಲಸಿಕೆ ಪೂರೈಕೆ ಕಾರ್ಯದಲ್ಲಿ “ರಾಷ್ಟ್ರೀಯ ತಜ್ಞರ ತಂಡ” ರಚಿಸಲಾಗಿದ್ದು, ಅವರು ಆದ್ಯತೆಯನ್ನು ನಿರ್ಧರಿಸಲಿದ್ದಾರೆ. ದೇಶದ ದೂರದ ಮೂಲೆಗಳಲ್ಲಿರುವವರಿಗೆ ಲಸಿಕೆ ಲಭ್ಯವಾಗುವಂತೆ ಸಂಗ್ರಹಿಸಲು, 28,000 ಕೋಲ್ಡ್ ಚೈನ್ ಪಾಯಿಂಟ್ಗಳನ್ನು ಸ್ಥಾಪಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ರಾಜ್ಯ, ಜಿಲ್ಲಾ ಮತ್ತು ವಲಯ ಮಟ್ಟದಲ್ಲಿ ಸಮರ್ಪಿತ ಕಾರ್ಯಕರ್ತರ ತಂಡ, ತನ್ನ ಕಾರ್ಯವನ್ನು ಪಾರದರ್ಶಕ ಹಾಗೂ ಜವಾಬ್ದಾರಿಯುತ ರೀತಿಯಲ್ಲಿ ನಿರ್ವಹಿಸಲಿದೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ತಜ್ಞರ ತಂಡ, ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲಿದೆ. ಪ್ರತಿಯೊಬ್ಬ ವ್ಯಕ್ತಿಗೂ ಲಸಿಕೆ ಖಾತರಿಪಡಿಸುವ ಕಾರ್ಯತಂತ್ರ ರೂಪಿಸುವಲ್ಲಿ ತಂಡ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ, ಸಹಕಾರ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.