ಒಟ್ಟಿಗೇ ವಿಧಿವಶರಾದ ವೃದ್ಧ ದಂಪತಿಗಳು!
– ಸಾವಿನಲ್ಲೂ ಒಂದಾದ ಅಜ್ಜ-ಅಜ್ಜಿ
– ಹೊಸನಗರದಲ್ಲಿ ಘಟನೆ
NAMMUR EXPRESS NEWS
ಹೊಸನಗರ : – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನರಾಗಿದ್ದಾರೆ. ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಕಂಡು ಬಂದಿದೆ. ಹೊಸನಗರ ತಾಲೂಕು ಮುಂಬಾರು ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ ಗಂಗಮ್ಮ ದಂಪತಿಗಳು ಗುರುವಾರ ಬೆಳಗಿನ ಜಾವ ಒಂದು ಗಂಟೆಯ ಅಂತರದಲ್ಲಿ ಮೃತಪಟ್ಟು ಸಾವಿನಲ್ಲೂ ಒಂದಾಗಿದ್ದಾರೆ.
ಪತಿ ಹೊಳೆಯಪ್ಪನವರು ಅನಾರೋಗ್ಯದಿಂದ ಮೃತಪಟ್ಟ ವಿಷಯ ತಿಳಿಯುತಿದ್ದಂತೆ ಪತ್ನಿ ಗಂಗಮ್ಮ ತೀವ್ರ ಹೃದಯಘಾತದಿಂದ ಗಂಡನೊಂದಿಗೆ ಇಹಲೋಕ ತ್ಯಜಿಸಿರುವುದಾಗಿ ತಿಳಿದು ಬಂದಿದೆ. ಮೃತ ದಂಪತಿಗಳು, ಇಬ್ಬರು ಗಂಡು ಮತ್ತು ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗ ಬಿಟ್ಟಗಲಿದ್ದಾರೆ. ಮೃತ ದಂಪತಿಗಳ ನಿಧನಕ್ಕೆ ಮುಂಬಾರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.