ರಾಜಕೀಯ ಮುಖಂಡರಾದ, ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಲೇಖನ ಮೂರ್ತಿ ಇನ್ನಿಲ್ಲ!
– ಮುಂಬಾರ್ ಸೊಸೈಟಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾಗಿದ್ದ ಲೇಖನ ಮೂರ್ತಿ ಇಂದು ನಿಧನ!
– ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಧೀಮಂತ
NAMMUR EXPRESS NEWS
ಹೊಸನಗರ ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿಗಳು, ಮುಂಬಾರ್ ಸೊಸೈಟಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹಾಗೂ ರಾಜಕೀಯ ಮುಖಂಡರು ಆದ ಲೇಖನ ಮೂರ್ತಿ(71) ಸಾವಂತೂರ್ ಅವರು ಮಾ. 31ರಂದು (ಇಂದು) ಬೆಳಗಿನ ಜಾವ 3 ಘಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಕಳೆದ ಹತ್ತು ವರ್ಷಕ್ಕೂ ಹೆಚ್ಚು ಕಾಲ ಹೊಸನಗರ ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದು, ತಾಲೂಕಿನ ಮುಂಬಾರ್ ಗ್ರಾಮದ ಸಾವಂತೂರಿನ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಅಂತಿಮ ಸಂಸ್ಕಾರವನ್ನು ಮಾ.31 ಅಂದರೆ ಇಂದು ಅವರ ಸ್ವಂತ ಊರು ಸಾವಂತೂರಿನಲ್ಲಿ ನಡೆಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಆತ್ಮಕ್ಕೆ ದೇವರು ಚಿರ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಪರಮಾತ್ಮ ನೀಡಲಿ.
