ಹೊಸನಗರ ತಾಲೂಕು ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾಗಿ ಸುಮಾ ಸುಬ್ರಹ್ಮಣ್ಯ.!
– ಮಲೆನಾಡ ಮಹಿಳಾ ಸಂಘಟಕಿಗೆ ಒಲಿದ ಹುದ್ದೆ
– ಗೀತಾ, ಶಿವಣ್ಣ,ಕಿಮ್ಮನೆ ಸೇರಿ ಅನೇಕ ನಾಯಕರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ
NAMMUR EXPRESS NEWS
ಹೊಸನಗರ: ಹೊಸನಗರ ತಾಲೂಕು ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾಗಿ ಸುಮಾ ಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ. ಹೊಸನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಮಾ ಸುಬ್ರಮಣ್ಯ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಅನೀತಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಹೊಸನಗರ ತಾಲೂಕು ಪಂಚಾಯಿತಿಗೆ ಎರಡು ಬಾರಿ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದಲ್ಲಿ ನಿರ್ದೇಶಕರಾಗಿ, ಕೊಡಚಾದ್ರಿ ಮಹಿಳಾ ಬ್ಯಾಂಕ್ ನಿರ್ದೇಶಕರಾಗಿ, ವಿವಿಧ ಮಹಿಳಾ ಹಾಗೂ ಸಂಘಟನೆಗಳಲ್ಲಿ ಕೆಲಸ ಮಾಡಿ ಅನುಭವವಿರುವ ಸುಮಾ ಸುಬ್ರಹ್ಮಣ್ಯ ಅವರು ಇದೀಗ ನೂತನವಾಗಿ ಹೊಸನಗರ ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಸೋಮವಾರ ಹೊಸ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್, ಆರ್ಎಂ ಮಂಜುನಾಥಗೌಡ, ಸುಂದರೇಶ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿದರು.
2 ಬಾರಿ ಹೊಸನಗರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿದಂತೆ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಸುಮಾ ಸುಬ್ರಹ್ಮಣ್ಯ ಮಹಿಳಾ ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಕೆಲಸ ಮಾಡಿದ್ದಾರೆ. ವಿಶೇಷವಾಗಿ ಬಂಧು ಬಳಗವನ್ನು ಸ್ನೇಹಿತರನ್ನು ಹೊಂದಿರುವ ಇವರು ಅಪಾರ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಭವಿಷ್ಯದ ಭರವಸೆಯ ನಾಯಕರಾಗುವಲ್ಲಿ ಈ ಸ್ಥಾನ ಮಾನ ಪ್ರಮುಖವಾಗಿದ್ದು, ಪಕ್ಷಕ್ಕೂ ಕೂಡ ಇವರ ಸೇವೆ ಮತ್ತಷ್ಟು ಬಲ ನೀಡಿದೆ.
ಎಂ.ಎ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸುಮ ಸುಬ್ರಮಣ್ಯ ಈಗ ಪಕ್ಷ ಸಂಘಟನೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಇನ್ನು ಇವರಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರ್ಎಂ ಮಂಜುನಾಥಗೌಡ, ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ, ತೀರ್ಥಹಳ್ಳಿ ಎಪಿಎಂಸಿ ಮಾಜಿ ಅಧ್ಯಕ್ಷ ಮಹಾಬಲೇಶ್ ಹಸಿರುಮನೆ ಸೇರಿದಂತೆ ಅನೇಕರು ಶುಭಾಶಯ ಸಲ್ಲಿಸಿದ್ದಾರೆ.
ಸುಮಾ ಸಾಧನೆಯ ಹಿಂದೆ ಸುಬ್ರಹ್ಮಣ್ಯ ಮಾಸ್ತಿಕಟ್ಟೆ
ಹೊಸನಗರ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮದೇ ಹೆಸರು ಮೂಡಿಸಿರುವಂತಹ ಯುವ ನಾಯಕ ಹಾಗೂ ಕಷ್ಟ ಎಂದವರಿಗೆ ನೆರವಾಗುವ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರು ತಮ್ಮ ಪತ್ನಿ ಸುಮಾ ಅವರ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ತಮ್ಮದೇ ಹೆಸರು ಮೂಡಿಸಿರುವಂತಹ ಈ ದಂಪತಿಗಳು ರಾಜಕೀಯವಾಗಿ ಮತ್ತಷ್ಟು ಸ್ಥಾನಮಾನ ಪಡೆಯಲಿ ಎಂದು ಜನ ಆಶೀರ್ವದಿಸಿದ್ದಾರೆ.