- ವಿಜಯಪುರದ ಬಸವನ ಬಾಗೇವಾಡಿಯ ಹಳ್ಳಿ
- ಮನೆಯಲ್ಲಿದ್ದವರು ನಾಪತ್ತೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್ ಕೊಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಿಡಗುಂದಿ ಪಟ್ಟಣದಲ್ಲಿರುವ ಸಂತ್ರಸ್ತ ಯುವತಿಯ ಸಂಬಂಧಿಕರ ಮನೆಗೆ ಪೊಲೀಸ್ ನೋಟಿಸ್ ಅಂಟಿಸಲಾಗಿದೆ. ಸಂತ್ರಸ್ತೆಯ ತಾಯಿಯ ತವರು ಮನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿದೆ. ಇದೀಗ ಆ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಮನೆಯಲ್ಲಿ ಯಾರೂ ಇರದ ಕಾರಣ ಬೀಗ ಹಾಕಿರುವ ಮನೆಗೆ ನೋಟಿಸ್ ಅಂಟಿಸಿದ್ದಾರೆ. ಆದರೆ ಕುಟುಂಬ ನಾಪತ್ತೆಯಾಗಿದೆ. ಈಗಾಗಲೇ 5ಕ್ಕೂ ಹೆಚ್ಚು ಮಂದಿಯನ್ನು SIಖಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.