ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ: ರಾಜ್ಯದಲ್ಲಿ ಹೋರಾಟದ ಕಿಚ್ಚು!
– ಪ್ರೀತಿ ನಿರಾಕರಣೆ ಕಾರಣ: ಹುಬ್ಬಳ್ಳಿಯಲ್ಲಿ ನಡೆದ ಘಟನೆ
– ರಾಜ್ಯದಲ್ಲಿ ಪ್ರತಿಭಟನೆ ಕಿಚ್ಚು ಹಚ್ಚಿಸಿದ ಘಟನೆ
– ಗದಗದಲ್ಲಿ ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ: ಇನ್ನು ನಿಗೂಢ
NAMMUR EXPRESS NEWS
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲೇ ಗುರುವಾರ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಕೊಲೆಯಾದ ವಿದ್ಯಾರ್ಥಿನಿ. ಈಕೆ ಹು-ಧಾ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ. ಅದೇ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ಫೇಲಾಗಿ ಮನೆಯಲ್ಲಿದ್ದ ಬೆಳಗಾವಿ ಜಿಲ್ಲೆ ಮೂಲದ ಫಯಾಜ್ ಎಂಬುವವ ಆರೋಪಿ. ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಂಜೆ ಮನೆಗೆ ಹೊರಡುತ್ತಿದ್ದಾಗ ಮಾಸ್ಕ್ ಹಾಕಿಕೊಂಡು ಬಂದ ಆರೋಪಿ ಏಕಾಏಕಿ ನೇಹಾ ಮೇಲೆ ದಾಳಿ ಮಾಡಿ ಚಾಕುವಿನಿಂದ 9 ಬಾರಿ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಇರಿದಿದ್ದಾನೆ. ನಂತರ ಚಾಕು ಅಲ್ಲಿಯೇ ಎಸೆದು ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ವಿದ್ಯಾರ್ಥಿಗಳೇ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಈ ಘಟನೆ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಈ ವಿಷಯ ಹೋರಾಟಕ್ಕೆ ಸಾಕ್ಷಿಯಾಗಿದೆ.
ಪ್ರೀತಿ ನಿರಾಕರಣೆ ಕಾರಣ?
ಫಯಾಜ್ ಕೆಲವು ದಿನಗಳಿಂದ ನೇಹಾಗೆ ಪ್ರೀತಿಸುವಂತೆ ಬೆನ್ನುಬಿದ್ದಿದ್ದ. ಆದರೆ ಆಕೆ ನಿರಾಕರಿಸಿದ್ದಳು ಎನ್ನಲಾಗಿದೆ. ಇದೇ ಕಾರಣಕ್ಕೆ ಅವಳನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ..!
– ಬೆಚ್ಚಿಬಿದ್ದ ಗದಗ-ಬೆಟಗೇರಿ: ಕೊಲೆಗೆ ಕಾರಣ ಏನು?
ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮನೆಯಲ್ಲಿ ಮಲಗಿದ್ದ ಒಂದೆ ಕುಟುಂಬದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ.
ಗದಗ ನಗರದ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16 ) ಕೊಲೆಯಾದ ದುರ್ದೈವಿಗಳು. ಕೊಪ್ಪಳದಿಂದ ಪ್ರಕಾಶ ಬಾಕಳೆ ಮನೆಗೆ ಬಂದಿದ್ದ ಪರುಶುರಾಮ, ಲಕ್ಷ್ಮಿ, ಅಕಾಂಕ್ಷಾ ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಗಳು ಕೊಲೆಯಾಗಿದ್ದು ವಿಯ ಅಟ್ಟಹಾಸ ಎಂಬಂತಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆಯೆ ದುಷ್ಕರ್ಮಿಗಳು ಎಸ್ಕೇಪ್ ಆದರೆಂದು ತಿಳಿದು ಬಂದಿದೆ. ಒಂದು ವೇಳೆ ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ದರೆಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿದ್ದು ಇನ್ನಷ್ಟು ಭಯವನ್ನುಂಟು ಮಾಡಿದೆ.
ಪೋಲಿಸರು ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಬಿ.ಎಸ್.ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ.ಸಂಕದ, ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸೇರಿ ಪೋಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ದುಷ್ಕರ್ಮಿಗಳ ಬಂದನಕ್ಕೆ ಜಾಲ.!
ಈ ಘಟನೆಗೆ ಸಂಬಂಧಿಸಿದಂತೆ ನಿಖರವಾದ ಮಾಹಿತಿ ಸಿಕ್ಕಿಲ್ಲ ತನಿಖೆ ತೀವ್ರಗತಿಯಲ್ಲಿ ಸಾಗಿದ್ದು ದುಷ್ಕರ್ಮಿಗಳನ್ನು ತೀವ್ರವಾಗಿ ಪತ್ತೆ ಮಾಡಿ ಬಂದಿಸಲಾಗುವುದೆಂದು ಎಸ್ಪಿ ಬಿ.ಎಸ್.ನೇಮಗೌಡ್ರ ತಿಳಿಸಿದ್ದಾರೆ. ಕೊಲೆಗೆ ಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.