ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಮೋದಿ ಭೇಟಿ
– ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ
– ಒಕ್ಕಲಿಗ ಸಮುದಾಯದ ರಾಜಕೀಯ, ಧಾರ್ಮಿಕ ಗಣ್ಯರು ಭೇಟಿ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ನಾಗಮಂಗಲ: ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಡಾ.ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣಾ ಕಾರ್ಯಕ್ರಮ ಸಾವಿರಾರು ಜನರ ಸಮ್ಮುಖದಲ್ಲಿ ನಡೆದಿದ್ದು,ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು “ಭೈರವೈಕ್ಯ ಮಂದಿವನ್ನು ಲೋಕಾರ್ಪಣೆಗೊಳಿಸಿ” ನಂತರ “ಸೌಂದರ್ಯಲಹರಿ ಮತ್ತು ಶಿವಮಹಿಮ್ನಃ ಸ್ತೋತ್ರಮ್” ಪುಸ್ತಕ ಬಿಡುಗಡೆಗೊಳಿಸಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ರಾಜ್ಕೋಟ್ ಅರ್ಷ ವಿದ್ಯಾ ಮಂದಿರದ ಪೂಜ್ಯ ಶ್ರೀ ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರವರು, ಮಾನ್ಯ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರವರು, ಕೆಂದ್ರ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಧಾನಸಭಾ ವಿಪಕ್ಷ ನಾಯಕರಾದ ಆರ್. ಅಶೋಕ್, ಕೃಷಿ ಸಚಿವ ಚಲುವರಾಯಸ್ವಾಮಿ ರವರು, ಶಾಸಕರು, ಸಂಸದರು, ಇನ್ನಿತರ ಪ್ರಮುಖರು, ಮಠದ ಭಕ್ತಾದಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ರಾಜ್ಯದ ವಿವಿಧ ಭಾಗದಿಂದ ಗಣ್ಯರು, ಒಕ್ಕಲಿಗ ನಾಯಕರು, ಪ್ರಮುಖರು ಭೇಟಿ ನೀಡಿದ್ದರು.








